4ನೇ ಡಿಸೆಂಬರ್ 2015
ನಾಮಪತ್ರ ಸಲ್ಲಿಕೆ ಇಲ್ಲ
ಮೈಸೂರು,ಡಿ.4.ಮೈಸೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೂರನೇ ದಿನವಾದ ಇಂದು ಯಾವುದೇ ನಾಮಪತ್ರ ಸಲ್ಲಿಕೆಯಾಗಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಮೈಸೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣಾಧಿಕಾರಿ ಸಿ.ಶಿಖಾ ಅವರು ತಿಳಿಸಿದ್ದಾರೆ.
ಮಾಜಿ ಸೈನಿಕರು: ಸಮಸ್ಯೆಗಳಿದ್ದಲ್ಲಿ ಮನವಿ ಸಲ್ಲಿಸಿ
ಮೈಸೂರು,ಡಿ.4.-ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ & ಸೆಂಟರ್, ಇವರ ವತಿಯಿಂದ ಬೆಳಗಾವಿ ಮಾರ್ಗವಾಗಿ ಬೆಂಗಳೂರಿನವರೆಗೆ ಸೈಕಲ್ ರ್ಯಾಲಿ ``ತಂಬಿ ಮಿಲಾಪ`` ಅನ್ನು ಹಮ್ಮಿಕೊಂಡಿದ್ದು, ದಿನಾಂಕ 16-12-2015ರ ಸಂಜೆ 4 ಘಂಟೆಗೆ ಮೈಸೂರಿನ ಉಪ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಸ್ಕ್ವಾಡರ್ನ್ ಲೀಡರ್ ಎ. ಬಿ. ದೇವಯ್ಯ ಭವನಕ್ಕೆ ಆಗಮಿಸುವರು.
ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್‍ನಲ್ಲಿ ಸೇವೆ ಸಲ್ಲಿಸಿರುವಂತಹ ಮಾಜಿ ಸೈನಿಕರ ಮತ್ತು ಅವರ ಅವಲಂಬಿತರುಗಳ ವೈಯಕ್ತಿಕ ಹಾಗೂ ಸಾಮೂಹಿಕವಾಗಿ ಇರಬಹುದಾದ ಸಮಸ್ಯೆಗಳನ್ನು ಆಲಿಸಲು ದಿನಾಂಕ 16-12-2015ರ ಸಂಜೆ 4 ಘಂಟೆಗೆ ಮೈಸೂರಿನ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಾರ್ಯಾಲಯ, ಸ್ಕ್ವಾಡ್ರನ್ ಲೀಡರ್ ಎ.ಬಿ. ದೇವಯ್ಯ ಭವನದಲ್ಲಿ ಸಭೆ ಏರ್ಪಡಿಸಲಾಗಿದೆ.
ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್‍ನಲ್ಲಿ ಸೇವೆ ಸಲ್ಲಿಸಿರುವಂತಹ ಮಾಜಿ ಸೈನಿಕರು ಮತ್ತು ಅವರ ಅವಲಂಬಿತರು ತಮ್ಮ ಎಲ್ಲಾ ಸಮಸ್ಯೆಗಳನ್ನು ಖುದ್ದಾಗಿ ಲಿಖಿತ ರೂಪದ ಅರ್ಜಿಯನ್ನು ದಿನಾಂಕ 12-12-2015ರೊಳಗಾಗಿ ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮೈಸೂರು ಇವರಿಗೆ ನೇರವಾಗಿ ಸಲ್ಲಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು.
ಹೆಚ್ಚಿನ ವಿವರಗಳಿಗೆ ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮೈಸೂರು ಇವರನ್ನು ದೂರವಾಣಿ ಸಂಖ್ಯೆ 0821-2425240 ನಲ್ಲಿ ಸಂಪರ್ಕಿಸಬಹುದಾಗಿದೆ.
ಡಿ.10 ರಂದು ವಿಶ್ವ ಮಾನವ ಹಕ್ಕುಗಳ ದಿನಾಚರಣೆ
ಮೈಸೂರು,ಡಿ.4.ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆಯ ಸಂಯುಕ್ತಾಶ್ರಯದಲ್ಲಿ ದಿನಾಂಕ 10-12-15 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಆಚರಿಸಲಾಗುವುದು.
ಕಾರ್ಯಕ್ರಮದ ಉದ್ಘಾಟನೆಯ ನಂತರ ಮಾನವ ಹಕ್ಕುಗಳು, ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ರಕ್ಷಣೆ, ಮಕ್ಕಳ ಹಕ್ಕು ಹಾಗೂ ಅಭಿವೃದ್ಧಿ ಕುರಿತಂತೆ ವಿಚಾರ ಸಂಕಿರಣ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರವೇಶಾತಿ ಶುಲ್ಕ ಪಾವತಿಗೆ ದಿನಾಂಕ ನಿಗಧಿ
ಮೈಸೂರು,ಡಿ.4.ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2015-16 ನೇ ಸಾಲಿಗೆ ದ್ವಿತೀಯ ಹಾಗೂ ತೃತೀಯ ಬಿ.ಎ/ಬಿ.ಕಾಂ ಮತ್ತು ಅಂತಿಮ ಎಂ.ಎ/ ಎಂ.ಕಾಂ ಶಿಕ್ಷಣ ಕ್ರಮಗಳ ಪ್ರವೇಶಾತಿ ನವೀಕರಣಕ್ಕೆ ದಿನಾಂಕ ನಿಗಧಿ ಪಡಿಸಿದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲದ ಕುಲಸಚಿವರು ತಿಳಿಸಿದ್ದಾರೆ.
ದ್ವಿತೀಯ ಬಿ.ಎ., ಬಿ.ಕಾಂ ಪ್ರವೇಶಾತಿಗೆ ದಂಡ ಶುಲ್ಕವಿಲ್ಲದೆ ಶುಲ್ಕ ಪಾವತಿಸಲು 2016 ಜನವರಿ 4, ರೂ 200/- ದಂಡ ಶುಲ್ಕದೊಂದಿಗೆ ಶುಲ್ಕ ಪಾವತಿಸಲು ಜನವರಿ18 ಹಾಗೂ ರೂ 400/- ದಂಡ ಶುಲ್ಕದೊಂದಿಗೆ ಶುಲ್ಕ ಪಾವತಿಸಲು ಜನವರಿ 28 ಕೊನೆಯ ದಿನಾಂಕವಾಗಿರುತ್ತದೆ.
ತೃತೀಯ ಬಿ.ಎ., ಬಿ.ಕಾಂ ಪ್ರವೇಶಾತಿಗೆ ದಂಡ ಶುಲ್ಕವಿಲ್ಲದೆ ಶುಲ್ಕ ಪಾವತಿಸಲು 2016 ಜನವರಿ 5, ರೂ 200/- ದಂಡ ಶುಲ್ಕದೊಂದಿಗೆ ಶುಲ್ಕ ಪಾವತಿಸಲು ಜನವರಿ 19 ಹಾಗೂ ರೂ 400/- ದಂಡ ಶುಲ್ಕದೊಂದಿಗೆ ಶುಲ್ಕ ಪಾವತಿಸಲು ಜನವರಿ 29 ಕೊನೆಯ ದಿನಾಂಕವಾಗಿರುತ್ತದೆ.
ಅಂತಿಮ .ಎಂ.ಎ, ಎಂ.ಕಾಂ ಪ್ರವೇಶಾತಿಗೆ ದಂಡ ಶುಲ್ಕವಿಲ್ಲದೆ ಶುಲ್ಕ ಪಾವತಿಸಲು 2016 ಜನವರಿ 6, ರೂ 200/- ದಂಡ ಶುಲ್ಕದೊಂದಿಗೆ ಶುಲ್ಕ ಪಾವತಿಸಲು ಜನವರಿ 20 ಹಾಗೂ ರೂ 400/- ದಂಡ ಶುಲ್ಕದೊಂದಿಗೆ ಶುಲ್ಕ ಪಾವತಿಸಲು ಜನವರಿ 30 ಕೊನೆಯ ದಿನಾಂಕವಾಗಿರುತ್ತದೆ.
ನಿಗಧಿತ ದಿನಾಂಕದೊಳಗೆ ಪ್ರವೇಶಾತಿ ನವೀಕರಣ ಮಾಡಿಕೊಳ್ಳುವುದು. ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ ತಿತಿತಿ.ಞsoumಥಿsoಡಿe.eಜu.iಟಿ ಸಂಪರ್ಕಿಸುವುದು.
ವಿಶೇಷ ಉಪನ್ಯಾಸ ಮಾಲೆ
ಮೈಸೂರು,ಡಿ.4.ಮೈಸೂರು ವಿಶ್ವವಿದ್ಯಾನಿಲಯ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಇವರುಗಳ ಸಂಯುಕ್ರಾಶ್ರಯದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಶತಮಾನೋತ್ಸವ ಆಚರಣೆ ಪ್ರಯುಕ್ತ ಡಿಸೆಂಬರ್ 7 ರಿಂದ 9 ರವರೆಗೆ ಮೈಸೂರು ವಿಶ್ವವಿದ್ಯಾನಿಲಯದ ಭೌತವಿಜ್ಞಾನ ಅಧ್ಯಂiÀiನ ವಿಭಾಗದ ಐನ್‍ಸ್ಟೈನ್ ಸಭಾಂಗಣದಲ್ಲಿ ಸ್ನಾತಕೋತ್ತರ ವಿಜ್ಞಾನ ವಿಶೇಷ ಉಪನ್ಯಾಸ ಮಾಲೆಯನ್ನು ಹಮ್ಮಿಕೊಳ್ಳಲಾಗಿದೆ.
ಡಿಸೆಂಬರ್ 7 ರಂದು ಬೆಳಿಗ್ಗೆ 9-30 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಕೆ.ಎಸ್. ರಂಗಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು ಹಾಗೂ ಟಾಟಾ ಮೂಲಭೂತ ಸಂಶೋಧನಾ ಸಂಸ್ಥೆಯ ಸಂದರ್ಶಕ ಪ್ರಾಧ್ಯಪಕ ಪ್ರೋ. ಎನ್ ಡಿ. ಹರಿದಾಸ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಮೈಸೂರು ಚಲೋ ಕಾರ್ಯಕ್ರಮ ಮುಂದೂಡಿಕೆ
ಮೈಸೂರು,ಡಿ.4.ಜಿಲ್ಲಾಡಳಿತದ ವತಿಯಿಂದ ಡಿಸೆಂಬರ್ 5 ರಂದು ಆಯೋಜಿಸಲು ಉದ್ದೇಶಿಸಲಾಗಿದ್ದ ಮೈಸೂರು ಚಲೋ ಕಾರ್ಯಕ್ರಮವನ್ನು ಮೈಸೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತ ಚುನಾವಣಾ ನೀತಿ ಸಂಹಿತೆ ಹಿನ್ನಲೆಯಲ್ಲಿ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟದ ದಿನಾಂಕ ವಿಸ್ತರಣೆ
ಮೈಸೂರು,ಡಿ.4.ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗದ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪುಸ್ತಕಗಳನ್ನು ಕನಿಷ್ಠ ಶೇ. 15 ರಿಂದ ಗರಿಷ್ಠ 33.33ರ ರಿಯಾಯಿತಿ ದರದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗದಲ್ಲಿ ಮಾರಾಟ ಮಾಡಲಾಗುತ್ತಿರುವ ಅವಧಿಯನ್ನು ವಿಸ್ತರಿಸಲಾಗಿದ್ದು, ಸದರಿ ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ದಿನಾಂಕ 05-01-2016 ರವರೆಗೆ ಪಡೆಯಬಹುದಾಗಿದೆ. ವಿದ್ಯಾರ್ಥಿ ವೃಂದ, ಉಪನ್ಯಾಸಕರು ಮತ್ತು ಪುಸ್ತಕ ಪ್ರೇಮಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಸಾರಾಂಗದ ನಿರ್ದೇಶಕ ಪ್ರೊ. ಎಂ.ಜಿ. ಮಂಜುನಾಥ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

No comments:
Post a Comment