ಸಂಜೆ ಮಿತ್ರ :ಬೆಂಗಳೂರು: ಉಪ ಲೋಕಾಯುಕ್ತರ ಹುದ್ದೆಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಆನಂದ್ ಅವರನ್ನು ಹೆಸರನ್ನು ಶಿಫಾರಸು ಮಾಡಲು ಉಪ ಲೋಕಾಯುಕ್ತ ನೇಮಕಾತಿ ಸಮಿತಿ ಸಭೆ ನಿರ್ಧರಿಸಿದೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಮಿತಿ ಸಭೆಯಲ್ಲಿ ಹೈಕೋರ್ಟ್ ನಿವೃತ್ತ ನ್ಯಾ.ಆನಂದ್ ಅವರ ಹೆಸರನ್ನು ಉಪ ಲೋಕಾಯುಕ್ತ ಹುದ್ದೆಗೆ ಶಿಫಾರಸು ಮಾಡಲು ಸರ್ವಾನುಮತದಿಂದ ನಿರ್ಧಾರಿಸಲಾಗಿದೆ ಎಂದು ಸಭೆಯ ನಂತರ ಸಿಎಂ ತಿಳಿಸಿದ್ದಾರೆ.
ಈ ಹಿಂದೆ ರಾಜ್ಯ ಸರ್ಕಾರ ಉಪ ಲೋಕಾಯುಕ್ತ ಹುದ್ದೆ ನ್ಯಾ.ಮಂಜುನಾಥ್ ಅವರ ಹೆಸರನ್ನು ಶಿಫಾರಸು ಮಾಡಿತ್ತು. ಆದರೆ ರಾಜ್ಯಪಾಲರು ಮಂಜುನಾಥ್ ಅವರನ್ನು ಹೆಸರನ್ನು ತಿರಸ್ಕರಿಸಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ ಈಗ ಹೊಸದಾಗಿ ಆನಂದ್ ಅವರ ಹೆಸರನ್ನು ರಾಜ್ಯಪಾಲರಿಗೆ ಶಿಫಾರಸು ಮಾಡಲಿದೆ.
ಸಭೆಯಲ್ಲಿ ಸ್ಪೀಕರ್ ಕಾಗೋಡು ತಿಮ್ಮಪ್ಪ, ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ, ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಅವರು ಭಾಗವಹಿಸಿದ್ದರು.
No comments:
Post a Comment