ಬೆಂಗಳೂರು:18. ಜಿಲ್ಲಾ ಪಂಚಾಯತ್ ಹಾಗೂ ತಾಲೂಕ ಪಂಚಾಯತ್ ಚುನಾವಣೆ ಹೈಕೋರ್ಟ್ ಸೋಮವಾರ ಗ್ರೀನ್ ಸಿಗ್ನಲ್ ನೀಡಿದೆ.
ಮೀಸಲಾತಿ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿದ್ದ 200ಕ್ಕೂ ಹೆಚ್ಚು ಅರ್ಜಿಗಳನ್ನು ವಜಾಗೊಳಿಸಿರುವ ಹೈಕೋರ್ಟ್ ಏಕ ಸದಸ್ಯ ಪೀಠ, ಅರ್ಜಿಗಳಲ್ಲಿ ಪರಿಗಣನೆಗೆ ಯೋಗ್ಯವಾದ ಯಾವುದೇ ಅಂಶಗಳಿಲ್ಲ ಎಂದು ಸ್ಪಷ್ಟಪಡಿಸಿದೆ.
ಜಿಲ್ಲಾ ಪಂಚಾಯತ್ ಚುನಾವಣೆಗೆ ಹೊರಡಿಸಿರುವ ಮೀಸಲು ಪಟ್ಟಿಯಲ್ಲಿ ಗೊಂದಲಗಳಿದ್ದು ಚುನಾವಣೆಗೆ ತಡೆ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ 200ಕ್ಕೂ ಹೆಚ್ಚು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್ ಅಬ್ದುಲ್ ನಜೀರ್ ಅವರಿದ್ದ ನ್ಯಾಯಪೀಠ, ತೀರ್ಪನ್ನು ಇಂದಿಗೆ ಕಾಯ್ದಿರಿಸಿದ್ದರು. ಇಂದು ತೀರ್ಪು ಪ್ರಕಟಿಸಿದ ಅವರು, ಅರ್ಜಿಗಳು ವಿಚಾರಣೆಗೆ ಯೋಗ್ಯವಾಗಿಲ್ಲ ಎಂದು ಹೇಳಿದ್ದಾರೆ.
No comments:
Post a Comment