Wednesday, 10 February 2016

Krpet

ಕೃಷ್ಣರಾಜಪೇಟೆ. ಸಮಗ್ರವಾದ ಗ್ರಾಮೀಣಾಭಿವೃದ್ಧಿಗೆ ಹೆಚ್ಚು ಒತ್ತು ಕೊಟ್ಟು, ಗ್ರಾಮೀಣ ಜನರ ಜೀವನ ಶೈಲಿಯನ್ನು ಬದಲಾವಣೆ ಮಾಡಿದ ಕೀರ್ತಿ ಜಾತ್ಯಾತೀತ ಜನತಾದಳಕ್ಕೆ ಸಲ್ಲುತ್ತದೆ. ಆದರೆ ಕಾಂಗ್ರೆಸ್ ಸರ್ಕಾರದ ಗ್ರಾಮೀಣ ಪ್ರದೇಶದ ಅಭಿವೃದ್ದಿಗೆ ಯಾವುದೇ ಯೋಜನೆಯನ್ನೂ ರೂಪಿಸಿಲ್ಲ ಆದ್ದರಿಂದ ಮುಂದಿನ ದಿನಗಳಲ್ಲಿ ನಡೆಯುವ ಜಿ.ಪಂ. ಮತ್ತು ತಾ.ಪಂ. ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್‍ಗೆ ತಕ್ಕ ಪಾಠ ಕಲಿಸಬೇಕು  ಎಂದು ಶಾಸಕ ಕೆ.ಸಿ.ನಾರಾಯಣಗೌಡ ಮತದಾರರಲ್ಲಿ ಮನವಿ ಮಾಡಿದರು.
ಅವರು ತಾಲೂಕಿನ ಸಿಂಧುಘಟ್ಟ, ನೀತಿಮಂಗಲ ಗ್ರಾಮಗಳಲ್ಲಿ ಶೀಳನೆರೆ ಜಿಲ್ಲಾ ಪಂಚಾಯಿತಿ ಮತ್ತು ಸಿಂಧಘಟ್ಟ ತಾಲೂಕು ಪಂಚಾಯಿತಿ ಅಭ್ಯರ್ಥಿಗಳಾದ ಹರಳಹಳ್ಳಿ ಮಂಜು ಮತ್ತು ಖಲೀಲ್ ಅಹಮದ್(ಬಾಬು) ಅವರ ಪರವಾಗಿ ಮತಯಾಚನೆ ಮಾಡಿ ಮಾತನಾಡಿದರು.
ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಯಲ್ಲಿ ಹಿಂದುಳಿದ ವರ್ಗಕ್ಕೆ ಹಾಗೂ ಮಹಿಳಾ ಮೀಸಲಾತಿಯನ್ನು ಜನತಾದಳ ಸರ್ಕಾರವು ಅಧಿಕಾರದಲ್ಲಿದ್ದ ಅವಧಿಯಲ್ಲಿ ಜಾ.ದಳ ನಾಯಕ ಎಚ್.ಡಿ.ದೇವೇಗೌಡ ಅವರ ಹೋರಾಟ ಫಲವಾಗಿ ಜಾರಿಗೆ ತರಲಾಗಿದೆ. ಇದರಿಂದಾಗಿ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ,ಸಣ್ಣ ಸಣ್ಣ ಜಾತಿಗಳು ರಾಜಕೀಯ ಶಕ್ತಿಯನ್ನು ಪಡೆಯುವಂತಾಯಿತು. ಮುಂಬರುವ ದಿನಗಳಲ್ಲಿ ವಿಧಾನಸಭೆ ಮತ್ತು ಲೋಕಸಭೆಗಳಲ್ಲಿಯೂ ಹಿಂದುಳಿದ ವರ್ಗಗಳಿಗೆ ಮೀಸಲಾತಿ ತರಬೇಕೆಂದು ಜೆಡಿಎಸ್ ನಾಯಕ ಹೆಚ್.ಡಿ.ದೇವೇಗೌಡ ಮತ್ತು ಹೆಚ್.ಡಿ.ಕುಮಾರಸ್ವಾಮಿ ಅವರು ಬೀದಿಗಿಳಿದು  ಹೋರಾಟ ಮಾಡಲಿದ್ದಾರೆ ಹಾಗಾಗಿ ಮತದಾರ ಬಂಧುಗಳು ಜೆಡಿಎಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಈ ಇಬ್ಬರೂ ನಾಯಕರಿಗೆ  ಶಕ್ತಿ ತುಂಬಬೇಕು ಎಂದು ನಾರಾಯಣಗೌಡ ಮನವಿ ಮಾಡಿದರು.
ಮಾಜಿ ಶಾಸಕ ಬಿ.ಪ್ರಕಾಶ್ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದರು. ತಾಲೂಕು ಜೆಡಿಎಸ್ ನೂತನ ಅಧ್ಯಕ್ಷ ಆರ್.ವೆಂಕಟಸುಬ್ಬೇಗೌಡ ಪ್ರಚಾರ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಿಂಧುಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಿದಂಬರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎನ್.ಮಹಾದೇವೇಗೌಡ, ಮಾಜಿ ಅಧ್ಯಕ್ಷರಾದ ಶಾಂತಮ್ಮ, ನಾಸೀರ್‍ಪಾಷಾ, ಜಿ.ಪಂ.ಅಭ್ಯರ್ಥಿ ಎಚ್.ಟಿ.ಮಂಜು, ತಾ.ಪಂ.ಅಭ್ಯರ್ಥಿ ಖಲೀಲ್‍ಅಹಮದ್(ಬಾಬು), ಮುಖಂಡರಾದ ಕರ್ತೇನಹಳ್ಳಿ ಸುರೇಶ್, ರಾಜೇನಹಳ್ಳಿಕುಮಾರಸ್ವಾಮಿ  ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕೆ.ಆರ್.ಪೇಟೆ ತಾಲೂಕಿನ ನೀತಿಮಂಗಲ ಸರ್ಕಲ್ ಗ್ರಾಮದಲ್ಲಿ ಶೀಳನೆರೆ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಶಾಸಕ ಕೆ.ಸಿ.ನಾರಾಯಣಗೌಡ ಮಾತನಾಡಿದರು, ಮಾಜಿಶಾಸಕ ಬಿ.ಪ್ರಕಾಶ್, ತಾಲೂಕು ಜಾದಳ ಅಧ್ಯಕ್ಷ ಆರ್.ವೆಂಕಟಸುಬ್ಬೇಗೌಡ, ಜೆಡಿಎಸ್ ಅಭ್ಯರ್ಥಿ ಹೆಚ್.ಟಿ.ಮಂಜು ಮತ್ತಿತರರು ಚಿತ್ರದಲ್ಲಿದ್ದಾರೆ.



No comments:

Post a Comment