ಮಹಿಳಾ ಆಯೋಗದಿಂದ ಏಪ್ರಿಲ್ 22 ಹಾಗೂ 23 ರಂದು ಕಾರ್ಯಾಗಾರ
ಮೈಸೂರು, ಏಪ್ರಿಲ್ 7. ರಾಜ್ಯ ಮಹಿಳಾ ಆಯೋಗ, ಮೈಸೂರು ಜಿಲ್ಲಾಡಳಿತ ಹಾಗೂ ಮೈಸುರು ವಿಶ್ವ ವಿದ್ಯಾನಿಲಯದ ಸಂಯುಕ್ತಾಶ್ರಯಲ್ಲಿ ಏಪ್ರಿಲ್ 22 ಹಾಗೂ 23 ರಂದು ಮೈಸೂರು ವಿಶ್ವ ವಿದ್ಯಾನಿಲಯದ ಆವರಣದಲ್ಲಿರುವ ಸೆನೆಟ್ ಭವನದಲ್ಲಿ “ಮಾನಕ ಹಕ್ಕುಗಳ ನೆಲೆಯಲ್ಲಿ ಮಹಿಳೆ ಮತ್ತು ಮಹಿಳಾ ಕಾನೂನು” ಹೆಸರಿನಡಿ ಎರಡು ದಿನಗಳ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.
ಇಂದು ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಹಿಳಾ ಆಯೋಗ ಅಧ್ಯಕ್ಷರಾದ ಮಂಜುಳ ಮಾನಸ ಅವರು ರಾಜ್ಯ ಮಹಿಳಾ ಆಯೋಗವು ರಾಜ್ಯದ ಎಲ್ಲಾ ಕಂದಾಯ ವಿಭಾಗ ಹಾಗೂ ವಿವಿಧ ಜಿಲ್ಲೆಗಳಲ್ಲಿ ಮಹಿಳಾ ವಿಷಯಕ್ಕೆ ಸಂಬಂಧಿಸಿದಂತೆ ಅನೇಕ ಜವಾಬ್ದಾರಿತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತ ಬಂದಿದೆ. ಈಗಾಗಲೇ ಸಾಕಷ್ಟು ಕಾರ್ಯಾಗಾರವನ್ನು ಸಂಬಂಧಪಟ್ಟ ಇಲಾಖೆ ಹಾಗೂ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಯಶಸ್ವಿವಾಗಿ ನಡೆಸಿದೆ ಎಂದರು.
“ಮಾನಕ ಹಕ್ಕುಗಳ ನೆಲೆಯಲ್ಲಿ ಮಹಿಳೆ ಮತ್ತು ಮಹಿಳಾ ಕಾನೂನು” ಕಾರ್ಯಾಗಾರವನ್ನು ಯಶಸ್ವಿಗೊಳಿಸಲು ಎಲ್ಲಾ ಇಲಾಖೆಗಳ ಸಹಾಯ ಅಗತ್ಯ. ಈ ಸಂಬಂಧ 4 ಸಮಿತಿಗಳನ್ನು ಶೀಘ್ರ ರಚಿಸುವ ಮೂಲಕ ಸದಸ್ಯರನ್ನು ನೇಮಕ ಮಾಡಿ ಜವಾಬ್ದಾರಿ ನೀಡಬೇಕಿದೆ. ಮಹಿಳೆಯರ ಮೇಲೆ ಇಂದಿಗೂ ಶೋಷಣೆ ಮತ್ತು ದೌರ್ಜನ್ಯ ನಿರಂತರವಾಗಿ ನಡೆಯುತ್ತಿದೆ. ಇದನ್ನು ತಡೆಗಟ್ಟಲು ಕೇವಲ ರಾಜ್ಯ ಮಹಿಳಾ ಆಯೋಗದಿಂದ ಸಾಧ್ಯವಿಲ್ಲ. ಸಂಬಂಧಪಟ್ಟ ಇಲಾಖೆಗಳಾದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಹಿಳೆಯರ ಸಂಘ ಸಂಸ್ಥೆಗಳೊಂದಿಗೆ ಎಲ್ಲರೂ ಕೈಜೋಡಿಸಿಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಸಿ.ಶಿಖಾ ಮಾತನಾಡಿ ಮಹಿಳೆ ಮತ್ತು ಮಹಿಳಾ ಕಾನೂನುನಿಗೆ ಸಂಬಂಧಿಸಿದಂತೆ ಎರಡು ದಿನಗಳು ವಿಷಯ ತಜ್ಞರನ್ನು ಆಹ್ವಾನಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಮಹಿಳೆಯರಿಗೆ ಕಾನೂನಿ ಬಗ್ಗೆ ಜಾಗೃತಿಗೊಳಿಸಬೇಕಿದೆ. ರಾಜ್ಯ ಮಹಿಳಾ ಆಯೋಗವು ಉತ್ತಮ ಸಂದೇಶ ಸಾರುವ ಕಾರ್ಯಕ್ರಮವನ್ನು ಮೈಸೂರು ಜಿಲ್ಲೆಯಲ್ಲಿ ಆಯೋಜಿಸಲು ಮುಂದೆ ಬಂದಿರುವು ಒಳ್ಳೆಯ ಬೆಳವಣಿಗೆ. ಸಾಕಷ್ಟು ಸಮಯವಿರುವುದರಿಂದ ಈ ಎರಡು ದಿನಗಳ ಕಾರ್ಯಾಗಾರವನ್ನು ಯಶಸ್ವಿಯಾಗಿ ಆಯೋಜಿಸಬಹುದು ಎಂದು ಹೇಳಿದರು.
ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಈ ಹಿಂದೆ ಬಹಳಷ್ಟು ಕಾರ್ಯಕ್ರಮಗಳನ್ನು ಸಂಘಟಿತವಾಗಿ ನಿರ್ವಹಿಸಿದ್ದಾರೆ. ಈ ಕಾರ್ಯಾಗಾರ ಕುರಿತು ಯೋಜನೆಗಳನ್ನು ರೂಪಿಸಿ ಇಲಾಖಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕಿದೆ. ಮಹಿಳಾ ಕಾನೂನುಗಳ ಬಗ್ಗೆ ಸಾಕಷ್ಟು ಮಹಿಳೆಯರಲ್ಲಿ ಮಾಹಿತಿಯಿಲ್ಲ. ಈ ಕೊರತೆಯಿಂದಾಗಿ ಸಮಾಜದಲ್ಲಿ ಇಂದಿಗೂ ಮಹಿಳೆಯರು ಶೋಷಣೆ ಹಾಗೂ ದೌರ್ಜನ್ಯಕ್ಕೆ ಒಳಗಾದರೂ ಯಾವುದೂ ಬೆಳಕೆಗೆ ಬರುತ್ತಿಲ್ಲ. ಮೊದಲು ಮಹಿಳೆಯರು ಮಹಿಳಾ ಕಾನೂನು ಹಾಗೂ ಇತರೆ ವಿಷಯಗಳ ಬಗ್ಗೆ ಜಾಗೃತಗೊಳಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಿ.ಎ.ಗೋಪಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ರಾಧಾ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ನಿರ್ಮಲಾ ಮಠಪತಿ ಹಾಗೂ ಇತರೆ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದರು.

No comments:
Post a Comment