ಅಕ್ಟೋಬರ್ 1 ರಂದು ದಸರಾ ಮಹೋತ್ಸವ ಉದ್ಘಾಟನೆ
ಮೈಸೂರು.ಸೆ.30. ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿಯ ಸನ್ನಿಧಿಯಲ್ಲಿ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಡನೆ ದಸರಾ ಮಹೋತ್ಸವ 2016 ರನ್ನು ಅಕ್ಟೋಬರ್ 1 ರಂದು ಬೆಳಿಗ್ಗೆ 11-40 ರಿಂದ ಸಲ್ಲುವ ಶುಭ ಧನುರ್ ಲಗ್ನದಲ್ಲಿ ಖ್ಯಾತ ಸಾಹಿತಿ ನಾಡೋಜ ಚನ್ನವೀರ ಕಣವಿ ಅವರು ಉದ್ಘಾಟಿಸಲಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ, ಲೋಕೋಪಯೋಗಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ|| ಹೆಚ್.ಸಿ. ಮಹದೇವಪ್ಪ, ಸಹಕಾರ ಹಾಗೂ ಸಕ್ಕರೆ ಸಚಿವರಾದ ಹೆಚ್.ಎಸ್. ಮಹದೇವಪ್ರಸಾದ್,ಪ್ರಾಥಮಿಕ ಹಾಗೂ ಫ್ರೌಢಶಿಕ್ಷಣ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ತನ್ವೀರ್ ಸೇಠ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವೆ ಉಮಾಶ್ರೀ, ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ, ಜವಳಿ ಮತ್ತು ಮುಜರಾಯಿ ಸಚಿವ ರುದ್ರಪ್ಪ ಮಾನಪ್ಪ ಲಮಾಣಿ ಅವರುಗಳು ಭಾಗವಹಿಸಲಿದ್ದು, ಶಾಸಕ ಜಿ.ಟಿ. ದೇವೇಗೌಡ ಅವರು ಅಧ್ಯಕ್ಷತೆ ವಹಿಸುವರು.
ದಸರಾ ಸಾಂಸ್ಕøತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರಧಾನ ಸಮಾರಂಭ ಅಕ್ಟೋರಬರ್ 1 ರಂದು ಸಂಜೆ 6 ಗಂಟೆಗೆ ಅರಮನೆ ಆವರಣದಲ್ಲಿ ಆಯೋಜಿಸಲಾಗಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಎಂ.ಕೆ. ಸೋಮಶೇಖರ್ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ವಿಧಾನಪರಿಷತ್ ಸಭಾಪತಿ ಡಿ.ಹೆಚ್. ಶಂಕರಮೂರ್ತಿ, ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಕೆ.ಬಿ. ಕೋಳಿವಾಡ, ಲೋಕೋಪಯೋಗಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ|| ಹೆಚ್.ಸಿ. ಮಹದೇವಪ್ಪ, ಸಹಕಾರ ಹಾಗೂ ಸಕ್ಕರೆ ಸಚಿವರಾದ ಹೆಚ್.ಎಸ್. ಮಹದೇವಪ್ರಸಾದ್,ಪ್ರಾಥಮಿಕ ಹಾಗೂ ಫ್ರೌಢಶಿಕ್ಷಣ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ತನ್ವೀರ್ ಸೇಠ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವೆ ಉಮಾಶ್ರೀ, ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ ಅವರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಅಕ್ಟೋಬರ್ 1 ರಂದು ಮಧ್ಯಾಹ್ನ 12-30 ಗಂಟೆಗೆ ಚಾಮುಂಡಿಬೆಟ್ಟ ಗೃಹ ಸಚಿವರಾದ ಡಾ|| ಜಿ. ಪರಮೇಶ್ವರ್ ಅವರು ಪೊಲೀಸ್ ಸಹಾಯವಾಣಿ ಕೇಂದ್ರದ ಉದ್ಘಾಟಿಸುವರು. ಮಧ್ಯಾಹ್ನ 12-40 ಗಂಟೆಗೆ ಚಾಮುಂಡೇಶ್ವರಿ ದೇವಾಲಯದ ಎದುರಿನಲ್ಲಿ ದಸರಾ ಕ್ರೀಡಾ ಜ್ಯೋತಿಯನ್ನು ಯುವ ಸಬಲೀಕರಣ ಕ್ರೀಡೆ ಹಾಗೂ ಮೀನುಗಾರಿಕೆ ಸಚಿವ ಪ್ರಮೋದ್ ಮಧ್ವರಾಜ್ ಅವರು ಉದ್ಘಾಟಿಸುವರು. ಅಂತರÀರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ಕು|| ಅಶ್ವಿನಿ ಪೊನ್ನಪ್ಪ ಅವರು ಭಾಗವಹಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಕಲಾಮಂದಿರದಲ್ಲಿ ದಸರಾ ಚಲನಚಿತ್ರೋತ್ಸವವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಆರ್.ವಿ. ದೇಶಪಾಂಡೆ, ಮಧ್ಯಾಹ್ನ 1-15 ಗಂಟೆಗೆ ವರುಣಾ ಕೆರೆ ಆವರಣದಲ್ಲಿ ಸಾಹಸ ಕ್ರೀಡೋತ್ಸವವನ್ನು ಯುವ ಸಬಲೀಕರಣ ಕ್ರೀಡೆ ಹಾಗೂ ಮೀನುಗಾರಿಕೆ ಸಚಿವ ಪ್ರಮೋದ್ ಮಧ್ವರಾಜ್ ಅವರು ಉದ್ಘಾಟಿಸುವರು. ಮಧ್ಯಾಹ್ನ 1-15 ಗಂಟೆಗೆ ಜೆ.ಕೆ. ಮೈದಾನದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಹಾಗೂ ಮಧ್ಯಾಹ್ನ 1-30 ಗಂಟೆಗೆ ಮಹಿಳಾ ದಸರಾವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವೆ ಉಮಾಶ್ರೀ ಅವರು ಉದ್ಘಾಟಿಸುವರು.
ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರಾದ ಯು.ಟಿ. ಖಾದರ್ ಅವರು ಮಧ್ಯಾಹ್ನ 1-30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಹತ್ತಿರವಿರುವ ಸ್ಕೌಟ್ಸ್ ಮತ್ತು ಗೈಡ್ ಆವರಣದಲ್ಲಿ ಆಹಾರ ಮೇಳ ಉದ್ಘಾಟಿಸುವರು. ಮಧ್ಯಾಹ್ನ 3 ಗಂಟೆಗೆ ಪ್ರಾಥಮಿಕ ಹಾಗೂ ಫ್ರೌಢಶಿಕ್ಷಣ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ತನ್ವೀರ್ ಸೇಠ್ ಅವರು ಮೈಸೂರಿನ ದೇವರಾಜಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ಕುಸ್ತಿ ಪಂದ್ಯಾವಳಿ ಉದ್ಘಾಟಿಸುವರು. ಅರಣ್ಯ, ಪರಿಸರ ಜೀವಶಾಸ್ತ್ರ ಸಚಿವ ಬಿ. ರಮಾನಾಥ್ ರೈ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 3-30 ಗಂಟೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವೆ ಉಮಾಶ್ರೀ ಅವರು ಕಾಡಾ ಕಚೇರಿ ಆವರಣದಲ್ಲಿ ದಸರಾ ಪುಸ್ತಕ ಮೇಳ ಕಾರ್ಯಕ್ರಮಕ್ಕೆ ಚಾಲನೆ ನೀಡುವರು.
ಸಂಜೆ 4 ಗಂಟೆಗೆ ಯುವ ಸಬಲೀಕರಣ ಕ್ರೀಡೆ ಹಾಗೂ ಮೀನುಗಾರಿಕೆ ಸಚಿವ ಪ್ರಮೋದ್ ಮಧ್ವರಾಜ್, ಅಂತರರಾಷ್ಟ್ರೀಯ ಪ್ಯಾರಾ ಅಥ್ಲಿಟ್ ದೀಪಾ ಮಲ್ಲಿಕ್, ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ಕು|| ಅಶ್ವಿನಿ ಪೊನ್ನಪ್ಪ ಅವರುಗಳು ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ರಾಜ್ಯ ದಸರಾ ಕ್ರೀಡಾಕೂಟ ಉದ್ಘಾಟಿಸುವರು.
ಸಂಜೆ 4 ಗಂಟೆಗೆ ತೋಟಗಾರಿಕೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ಕುಪ್ಪಣ ಪಾರ್ಕ್(ನಿಶಾದ್‍ಬಾಗ್) ನಲ್ಲಿ ಫಲಪುಷ್ಪ ಪ್ರದರ್ಶನ ಉದ್ಘಾಟಿಸುವರು.
ಸಂಜೆ 4 ಗಂಟೆಗೆ ಸಹಕಾರ ಮತ್ತು ಸಕ್ಕರೆ ಸಚಿವ ಹೆಚ್.ಎಸ್. ಮಹದೇವಪ್ರಸಾದ್ ಅವರು ರಂಗಾಯಣದಲ್ಲಿ ರಂಗಾಯಣ ನಾಟಕೋತ್ಸವಕ್ಕೆ ಚಾಲನೆ ನೀಡುವರು.
ಸಂಜೆ 4-30 ಗಂಟೆಗೆ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ, ಸಣ್ಣ ಕೈಗಾರಿಕೆ ಸಚಿವ ಜಾರಕಿಹೊಳಿ ರಮೇಶ್ ಲಕ್ಷ್ಮಣರಾವ್ ಅವರು ದಸರಾ ವಸ್ತುಪ್ರದರ್ಶನ ಆವರಣದಲ್ಲಿ ವಸ್ತುಪ್ರದರ್ಶನ ಉದ್ಘಾಟಿಸುವರು.
ಸಂಜೆ 6-30 ಗಂಟೆಗೆ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರು ಸಯ್ಯಾಜಿರಾವ್ ರಸ್ತೆಯಲ್ಲಿ ಹಸಿರು ಮಂಟಪ ದಸರಾ ದೀಪಾಲಂಕಾರ ಉದ್ಘಾಟಿಸುವರು.
No comments:
Post a Comment