Friday, 30 September 2016

ಅಕ್ಟೋಬರ್ 2 ರಂದು ಪ್ರಾರ್ಥನಾ ಸಭೆ
    ಮೈಸೂರು.ಸೆ.30.ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಹಾತ್ಮಗಾಂಧಿ ಜಯಂತಿ ಅಂಗವಾಗಿ ಪ್ರಾರ್ಥನಾ ಸಭೆ ಅಕ್ಟೋಬರ್ 2 ರಂದು ಬೆಳಿಗ್ಗೆ 8-30ಕ್ಕೆ ಶ್ರೀ ರಂಗಚಾರ್ಲು ಸ್ಮಾರಕ ಪುರಭವನದಲ್ಲಿ ಏರ್ಪಡಿಸಲಾಗಿದೆ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಜಿ. ಜಗದೀಶ ಅವರು ತಿಳಿಸಿದ್ದಾರೆ.
  

ಅಕ್ಟೋಬರ್ 2 ರಂದು ರಂಗೋಲಿ ಸ್ಪರ್ಧೆ
  ಮೈಸೂರು.ಸೆ.30. ಮೈಸೂರು ದಸರಾ ಮಹೋತ್ಸವ ಲಲಿತ ಕಲೆ ಮತ್ತು ಕರಕುಶಲ ಉಪಸಮಿತಿಯಿಂದ ಅಕ್ಟೋಬರ್ 2 ರಂದು ಬೆಳಿಗ್ಗೆ 10 ಗಂಟೆಗೆ ಸರಸ್ವತಿಪುರಂನ ಜೆ.ಎಸ್.ಎಸ್. ಸಂಸ್ಥೆಗಳ ಸಭಾಂಗಣದ ಆವರಣದಲ್ಲಿ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
   ಮಹಿಳೆಯರು ಮತ್ತು ಕಾಲೇಜು ವಿದ್ಯಾರ್ಥಿನಿಯರು ಭಾಗವಹಿಸಬಹುದಾಗಿದ್ದು, ಸ್ಪರ್ಧೆಗೆ ಬೇಕಾಗುವ ಸಾಮಗ್ರಿಗಳನ್ನು ಸ್ಪರ್ಧಿಗಳೇ ತರಬೇಕು. ಅದಕ್ಕೆ ತಗಲುವ ಕನಿಷ್ಠ ವೆಚ್ಚವನ್ನು ಉಪಸಮಿತಿಯಿಂದ ನೀಡಲಾಗುವುದು. ಉತ್ತಮವಾಗಿ ರಚಿಸಿದ ರಂಗೋಲಿ ಸ್ಪರ್ಧಿಗಳಿಗೆ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಲಾಗುವುದು.
  ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2513225 ನ್ನು ಸಂಪರ್ಕಿಸಬಹುದು. 

ಅಕ್ಟೋಬರ್ 2 ರಂದು ಆಕಾಶವಾಣಿಯಲ್ಲಿ ಕ್ಷೀರಾಧಾರೆ
   ಮೈಸೂರು, ಸೆ. 30 . ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಆಕಾಶವಾಣಿ ರೂಪಿಸಿರುವ ವಿನೂತನ ಕಾರ್ಯಕ್ರಮ ಭಾಗ್ಯವಾಣಿ-ಅಭಿವೃದ್ಧಿ ಯೋಜನೆಗಳೊಂದಿಗೆ ಅರ್ಥಪೂರ್ಣ ಪಯಣದ  5ನೇ ಸರಣಿಯಲ್ಲಿ ಅಕ್ಟೋಬರ್ 2 ರಂದು ಕ್ಷೀರಾಧಾರೆ-ಹೈನುಗಾರಿಕೆಗೆ ಉತ್ತೇಜನ  ರಾತ್ರಿ 7 ರಿಂದ 7-30ರವರೆಗೆ ರಾಜ್ಯದ 13 ಆಕಾಶವಾಣಿ ಕೇಂದ್ರಗಳ ಮೂಲಕ ರಾಜ್ಯಾದ್ಯಂತ ಪ್ರಸಾರವಾಗಲಿದೆ. ಈ ಕಾರ್ಯಕ್ರಮವನ್ನು ಮೈಸೂರು ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕ ಎನ್. ಕೇಶವ್‍ಮೂರ್ತಿ  ಅವರು ನಿರ್ಮಿಸಿದ್ದಾರೆ.
      ಸರ್ಕಾರ ರೂಪಿಸಿರುವ ಯೋಜನೆಯನ್ನು  ಪರಿಣಾಮಕಾರಿಯಾಗಿ ತಿಳಿಸುವುದೇ ಭಾಗ್ಯವಾಣಿ ಸರಣಿಯ ಮುಖ್ಯ ಆಶಯವಾಗಿದೆ. ಈ ಕಾರ್ಯಕ್ರಮ ನವೆಂಬರ್ 27 ರವರೆಗೆ ಪ್ರತಿ ಭಾನುವಾರ ರಾತ್ರಿ 7 ರಿಂದ 7-30 ರವರೆಗೆ ಅರ್ಧ ಗಂಟೆ ಪ್ರಸಾರವಾಗಲಿದೆ.  ಆಕಾಶವಾಣಿ ಮೂಲಕ ಪ್ರಸಾರವಾಗುವ ವಿವಿಧ ಯೋಜನೆಯ ಮಾಹಿತಿಯನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕ ಎನ್.ಆರ್ ವಿಶುಕುಮಾರ್ ಅವರು ಕೋರಿದ್ದಾರೆ

No comments:

Post a Comment