Tuesday, 13 September 2016

ರೈತರು ಹೈನುಗಾರಿಕೆಯನ್ನು ಅವಲಂಬಿಸಿದರೆ ಆರ್ಥಿಕವಾಗಿ ಸದೃಢರಾಗಬಹುದು-ಎಚ್.ಡಿ. ಚೌಡಯ್ಯ.

ರೈತರು ಹೈನುಗಾರಿಕೆಯನ್ನು ಅವಲಂಬಿಸಿದರೆ ಆರ್ಥಿಕವಾಗಿ ಸದೃಢರಾಗಬಹುದು-ಎಚ್.ಡಿ. ಚೌಡಯ್ಯ
ಮಂಡ್ಯ: ತಾಲೂಕಿನ ಹೊಳಲು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಸಂಘದ ಮಾಜಿ ಶಾಸಕ ಎಚ್.ಡಿ. ಚೌಡಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆ ಉದ್ಘಾಟಿಸಿ ಮಾತನಾಡಿದ ಎಚ್.ಡಿ.ಚೌಡಯ್ಯ ಅವರು, ಸಹಕಾರ ಸಂಘ ಸ್ಥಾಪನೆಯಾಗಿ ನಾಲ್ಕು ದಶಕಗಳು ಕಳೆದಿದ್ದು, ಪ್ರಗತಿಯತ್ತ ಸಾಗಿದೆ. ಪ್ರಸ್ತುತ ಕೃಷಿಯಲ್ಲಿ ನಷ್ಟವೇ ಹೆಚ್ಚು ಆಗುತ್ತಿರುವುದರಿಂದ ರೈತರು ಹೈನುಗಾರಿಕೆಯನ್ನು ಅವಲಂಬಿಸಿದರೆ ಆರ್ಥಿಕವಾಗಿ ಸದೃಢರಾಗಬಹುದು ಎಂದು ತಿಳಿದರು.
ಮನ್‍ಮುಲ್ ನಿರ್ದೇಶಕ ಚಂದ್ರು ಮಾತನಾಡಿ, ಒಕ್ಕೂಟದಿಂದ ಸಿಗುವ ಸೌಲಭ್ಯಗಳನ್ನು ರೈತರು ಸದುಪಯೋಗಪಡಿಸಿಕೊಳ್ಳಿ. ಅಲ್ಲದೆ, ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹಣ ನೀಡಲಾಗುವುದು. ವಿದ್ಯಾರ್ಥಿಗಳು ಒಕ್ಕೂಟದ ಯೋಜನೆಗಳನ್ನು ಉಪಯೋಗಿಸಿಕೊಳ್ಳುವಂತೆ ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಡೇರಿಗೆ ಹೆಚ್ಚು ಹಾಲು ಸರಬರಾಜು ಮಾಡುವ ರೈತರಾದ ಎಚ್.ಕೆ.ನಾಗರಾಜು, ಸುಶೀಲಮ್ಮ ಪಾಪಣ್ಣ, ಬೋರಮ್ಮ, ಕುಮಾರಿ ಅವರನ್ನು ಸನ್ಮಾನಿಸಲಾಯಿತು.
ಸಭೆಯಲ್ಲಿ ಸಹಕಾರ ಸಂಘದ ಅಧ್ಯಕ್ಷ ಶಿವಲಿಂಗಯ್ಯ, ಕಾರ್ಯದರ್ಶಿ ಎಚ್.ಎಲ್.ಶಿವಕುಮಾರ್, ನಿರ್ದೇಶಕರಾದ ಎಚ್.ಎಲ್. ಸ್ವಾಮಿ, ಪುಟ್ಟಸ್ವಾಮಿ, ಅರುಣ್, ಎಚ್.ಪಿ.ಕೃಷ್ಣ, ತಾಪಂ ಮಾಜಿ ಸದಸ್ಯ ಹೊ.ರಾ. ಕುಮಾರಸ್ವಾಮಿ, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಚ್.ಪಿ.ನಾಗರಾಜು, ಗ್ರಾಪಂ ಅಧ್ಯಕ್ಷೆ ಪ್ರೇಮಾ, ಉಪಾಧ್ಯಕ್ಷ ಜೋಗಯ್ಯ, ತಾಪಂ ಸದಸ್ಯೆ ರಜನಿಕುಮಾರ್, ಮನ್‍ಮುಲ್ ನಿರ್ದೇಶಕ ಎಸ್.ಪಿ. ಮಹೇಶ್,  ಒಕ್ಕಲಿಗರ ಸಂಘದ ಮಾಜಿ ಉಪಾಧ್ಯಕ್ಷ ಎಚ್.ಎಲ್.ಶಿವಣ್ಣ, ಆರ್‍ಎಪಿಸಿಎಂಎಸ್ ನಿರ್ದೇಶಕ ಶ್ರೀಧರ್ ಇತರರಿದ್ದರು.

No comments:

Post a Comment