Wednesday, 21 September 2016

ಕೃಷ್ಣರಾಜಪೇಟೆ. ಕಾವೇರಿ ನದಿಯ ನೀರಿನ ಹಂಚಿಕೆಯ ವಿಚಾರದಲ್ಲಿ ವಾಸ್ತವಾಂಶವನ್ನು ಗಣನೆಗೆ ತೆಗೆದುಕೊಳ್ಳದೇ ತಮಿಳುನಾಡಿಗೆ ಪ್ರತಿದಿನ 6ಸಾವಿರ ಕ್ಯೂಸೆಕ್ಸ್ ನೀರನ್ನು ಹರಿಯಬಿಡಬೇಕೆಂದು ಅವೈಜ್ಞಾನಿಕವಾದ ತೀರ್ಪನ್ನು ನೀಡಿರುವ ಸುಪ್ರೀಂಕೋರ್ಟಿನ ನ್ಯಾಯಮೂರ್ತಿಗಳ ಏಕಪಕ್ಷೀಯ ನಿರ್ಧಾರವನ್ನು ಖಂಡಿಸಿ ತೆಂಡೇಕೆರೆ ಬಾಳೆಹೊನ್ನೂರು ಶಾಖಾಮಠದ ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿಗಳ ನೇತೃತ್ವದಲ್ಲಿ ಒಂದು ದಿನದ ಸಾಂಕೇತಿಕ ಉಪವಾಸ ಸತ್ಯಾಗ್ರಹ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು.
ತಮಿಳುನಾಡು ಸರ್ಕಾರದ ಏಜೆಂಟರಂತೆ ಕೆಲಸ ಮಾಡುತ್ತಿರುವ ಸುಪ್ರೀಂಕೋರ್ಟಿನ ನ್ಯಾಯಮೂರ್ತಿಗಳ ವರ್ತನೆಯು ಖಂಡನಾರ್ಹವಾಗಿದೆ. ಕಾವೇರಿ ನ್ಯಾಯಾಧಿಕರಣ ಮಂಡಳಿಯು 3ಸಾವಿರ ಕ್ಯೂಸೆಕ್ಸ್ ನಂತೆ ಕಾವೇರಿ ನೀರನ್ನು ಹರಿಸಬೇಕೆಂದು ತೀರ್ಪ ನೀಡಿದ್ದರೆ ಗಾಯದ ಮೇಲೆ ಬರೆಎಳೆಯುವಂತೆ ನ್ಯಾಯ ನೀಡಿ ಅನ್ಯಾಯವನ್ನು ಸರಿಪಡಿಸಬೇಕಾದ ಸುಪ್ರೀಂಕೋರ್ಟಿನ ನ್ಯಾಯಮೂರ್ತಿಗಳು 6ಸಾವಿರ ಕ್ಯೂಸೆಕ್ಸ್ ನೀರನ್ನು ಸೆಪ್ಟಂಬರ್ 27ರ ವೆರೆಗೆ ಹರಿಸಬೇಕೆಂದು ಆದೇಶ ನೀಡಿರುವುದು ಎಷ್ಟಮಟ್ಟಿಗೆ ಸರಿ ಎಂಬುದನ್ನು ಸ್ವತಃ ನ್ಯಾಯಾಧೀಶರೇ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ ಎಂದು ತೆಂಡೇಕೆರೆ ಬಾಲೆಹೊನ್ನೂರು ಶಾಖಾಮಠದ ಶ್ರೀ ಗಂಗಾಧರ ಶಿವಾಚಾರ್ಯ ಸ್ವಾಮೀಜಿಗಳು ಬೇಸರ ವ್ಯಕ್ತಪಡಿಸಿದರು.
ಕಾವೇರಿಕೊಳ್ಳದಲ್ಲಿ ಜನಸಾಮಾನ್ಯರಿಗೆ ಕುಡಿಯುವ ನೀರಿಗೆ ತೀವ್ರವಾದ ಹಾಹಾಕಾರ ಉಂಟಾಗಿರುವುದು ಬಹಿರಂಗ ಸತ್ಯವಾಗಿದೆ. ವಾಸ್ತವಾಂಶವನ್ನು ನ್ಯಾಯಾಲಯದ ಗಮನಕ್ಕೆ ತಂದರೂ ಕಣ್ಣುಮುಚ್ಚಿಕೊಂಡು ಏಕಪಕ್ಷೀಯ ತೀರ್ಪನ್ನು ನೀಡುವ ನ್ಯಾಯಮೂರ್ತಿಗಳ ಕ್ರಮದಿಂದಾಗಿ ದೇಶದಲ್ಲಿ ನ್ಯಾಯವೇ ಸತ್ತುಹೋಗಿರುವಂತಹ ವಾತಾವರಣ ಕಂಡು ಬರುತ್ತಿದೆ. ಸುಪ್ರೀಂಕೋರ್ಟಿನ ತೀರ್ಪು ರಾಜ್ಯದ ರೈತರ ಪಾಲಿಗೆ ಮರಣಶಾಸನವಾಗಿದೆ. ಕಾವೇರಿಕೊಳ್ಳದ ಕೆರೆ-ಕಟ್ಟೆಗಳಲ್ಲಿ ನೀರಿಲ್ಲದೇ ಖಾಲಿ ಹೊಡೆಯುತ್ತಿವೆ. ನಮ್ಮ ಕೆರೆ-ಕಟ್ಟೆಗಳನ್ನು ತುಂಬಿಸಲು ನೀರು ಬಿಡದ ಸರ್ಕಾರವು ಅಣೆಕಟ್ಟೆಗಳಲ್ಲಿ ಕುಡಿಯುವ ನೀರಿಗಾಗಿ ಸಂಗ್ರಹಿಸಿ ಇಟ್ಟಿದ್ದ ನೀರನ್ನು ತಮಿಳುನಾಡಿನ ರೈತರು ಸಾಂಭಾ ಬೆಳೆಯನ್ನು ಬೆಳೆಯಲು ಹರಿಸುವಂತೆ ತೀರ್ಪೂ ನೀಡುವುದು ಸಂಪೂರ್ಣವಾಗಿ ಅವೈಜ್ಞಾನಿಕವಾಗಿದೆ. ಆದ್ದರಿಂದ ಮುಖ್ಯಮಂತ್ರಿಗಳು ಸುಪ್ರೀಂಕೋರ್ಟಿನ ಆದೇಶವನ್ನು ಧಿಕ್ಕರಿಸಿ ತಮಿಳುನಾಡಿಗೆ ನೀರನ್ನು ಹರಿಸಬಾರದು. ಕಾವೇರಿಕೊಳ್ಳದ ಭಾಗದ ಸಂಸದರು ಮತ್ತು ಶಾಸಕರು ಸಾಮೂಹಿಕವಾಗಿ ರಾಜೀನಾಮೆಯನ್ನು ನೀಡುವ ಮೂಲಕ ಸಾಂವಿಧಾನಿಕ ಬಿಕ್ಕಟ್ಟನ್ನು ನಿರ್ಮಿಸಿ ಪ್ರಧಾನಮಂತ್ರಿಗಳು ಹಾಗೂ ರಾಷ್ಟ್ರಪತಿಗಳು ಮಧ್ಯೆ ಪ್ರವೇಶಿಸಿ ನ್ಯಾಯ ದೊರಕಿಸಿಕೊಡುವಂತೆ ಒತ್ತಡ ಹಾಕಬೇಕು ಎಂದು ಗಂಗಾಧರಶ್ರೀಗಳು ಒತ್ತಾಯಿಸಿದರು. ಧರಣಿ ಸತ್ಯಾಗ್ರಹದಲ್ಲಿ ಆಸರೆ ಸಮಾಜಸೇವಾ ಟ್ರಸ್ಟಿನ ಅಧ್ಯಕ್ಷ ಹೆಚ್.ಬಿ.ಮಂಜುನಾಥ್, ರೈಲ್ವೆ ಮಾರ್ಗದ ಹೋರಾಟ ಸಮಿತಿಯ ಸಂಚಾಲಕ ಸಿಂದಘಟ್ಟ ಶಿವಲಿಂಗೇಗೌಡ, ಹಿಂದೂಪರ ಸಂಘಟನೆಗಳ ಕಾರ್ಯಕರ್ತರಾದ ಬಾಲು, ವಾಸುದೇವ, ಆರ್.ಜಗಧೀಶ್ ಸಮಾಜಸೇವಾ ಟ್ರಸ್ಟಿನ ಅಧ್ಯಕ್ಷ ಅಗ್ರಹಾರಬಾಚಹಳ್ಳಿ ಜಗಧೀಶ್, ಪುರಸಭೆಯ ಸದಸ್ಯರಾದ ದಿನೇಶ್, ಹೇಮಂತ್‍ಕುಮಾರ್, ಡಿ.ಪ್ರೇಮಕುಮಾರ್, ಮಾಜಿಸದಸ್ಯ ಕೆ.ಆರ್.ನೀಲಕಂಠ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಆರ್.ಲೋಕೇಶ್ ಮತ್ತಿತರರು ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು.
ಚಿತ್ರಶೀರ್ಷಿಕೆ: 21-ಏಖPಇಖಿಇ-01   ಕೆ.ಆರ್.ಪೇಟೆ ಪಟ್ಟಣದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಕಾವೇರಿ ನದಿ ನೀರಿನ ಹಂಚಿಕೆಯಲ್ಲಿ ತಮಿಳುನಾಡಿನ ಪರವಾಗಿ ಅವೈಜ್ಞಾನಿಕ ತೀರ್ಪನ್ನು ನೀಡಿರುವ ಸುಪ್ರೀಂಕೋರ್ಟಿನ ನ್ಯಾಯಾಧೀಶರ ವರ್ತನೆಯನ್ನು ಖಂಡಿಸಿ ತೆಂಡೇಕೆರೆ ಬಾಳೆಹೊನ್ನೂರು ಶಾಖಾಮಠದ ಶ್ರೀ ಗಂಗಾಧರಶಿವಾಚಾರ್ಯ ಶ್ರೀಗಳ ನೇತೃತ್ವದಲ್ಲಿ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಧರಣಿ ಉಪವಾಸ ಸತ್ಯಾಗ್ರಹ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

No comments:

Post a Comment