ರಸ್ತೆ ಉಬ್ಬು ನಿರ್ಮಾಣಕ್ಕೆ ಆಗ್ರಹಿಸಿ ಪ್ರತಿಭಟನೆ
ಮಂಡ್ಯ : ಮೈಸೂರು-ಬೆಂಗಳೂರು ಹೆದ್ದಾರಿಯ ತಾಲ್ಲೂಕಿನ ಹನಕೆರೆ ಸರ್ಕಲ್ ಬಳಿ ರಸ್ತೆ ಉಬ್ಬು ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಹಾಗೂ ರೈತ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಗಳು ಇಂದು ಪ್ರತಿಭಟನೆ ನಡೆಸಿದರು.
ಈ ಸ್ಥಳದಲ್ಲಿ ಹಾಗಿಂದಾಗೆ ಅಪಘಾತಗಳು ನಡೆಯುತ್ತಲೇ ಇರುತ್ತವೆ. ಅಪಘಾತದಲ್ಲಿ ಹಲವರು ಪ್ರಾಣ ಕಳೆದುಕೊಂಡಿ ದ್ದಾರೆ. ಸೋಮವಾರ ಸಂಜೆ ರೈತ ಶಿಕ್ಷಣ ಸಂಸ್ಥೆಯ ವಿದ್ಯಾ ರ್ಥಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸಾವನ್ನ ಪ್ಪಿದ್ದಾನೆ. ಬೆಳಿಗ್ಗೆ ಹಾಗೂ ಸಂಜೆ ವೇಳೆ ರಸ್ತೆ ದಾಟಲಾಗದಷ್ಟು ವಾಹನಗಳು ಸಂಚರಿಸುತ್ತವೆ. ಕೂಡಲೇ ರಸ್ತೆ ಉಬ್ಬು ನಿರ್ಮಾಣ ಮಾಡಬೇಡಬೇಕೆಂದು ಆಗ್ರಹಿಸಿ ಹೆದ್ದಾರಿ ಪಕ್ಕದಲ್ಲಿ ಕುಳಿತು ಪ್ರತಿಭಟನೆ ಆರಂಭಿಸಿದರು.
ಪ್ರತಿಭಟನಾ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಸವಿತ ಅವರು, ಹೆದ್ದಾರಿಗಳಲ್ಲಿ ಉಬ್ಬು ನಿರ್ಮಾಣಕ್ಕೆ ಸರ್ಕಾರದ ಒಪ್ಪಿಗೆ ಬೇಕಾಗುತ್ತದೆ. ಆದ್ದರಿಂದ ಬ್ಯಾರಿಕೇಟ್ ಅಳವಡಿಸಿ ವಾಹನಗಳ ವೇಗ ನಿಯಂತ್ರಣಕ್ಕೆ ಕ್ರಮ ವಹಿಸಲಾಗುವುದು. ಅಲ್ಲದೆ ಬೆಳಿಗ್ಗೆ 8ರಿಂದ 11 ಹಾಗೂ ಸಂಜೆ 3 ರಿಂದ 5 ಗಂಟೆಯ ವರೆಗೂ ಪೊಲೀಸ್ ಸಿಬ್ಬಂದಿ ನಿಯೋಜನೆಗೆ ಕ್ರಮ ವಹಿಸುವ ಭರವಸೆ ನೀಡಿದರು.
ಬಳಿಕ ಪ್ರತಿಭಟನಾ ವಾಪಸ್ ಪಡೆಯಲಾಯಿತು. ರೈತ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹೆಚ್.ಸಿ.ಪುಟ್ಟಯ್ಯ, ಉಪಾಧ್ಯಕ್ಷ ಹೆಚ್.ಬಿ.ರಾಜಣ್ಣ, ಗ್ರಾಮದ ಮುಖಂಡರಾದ ಹೆಚ್.ಬಿ. ಜಯರಾಮು, ಕಾಡಯ್ಯ ಸೇರಿದಂತೆ ನೂರಾರು ವಿದ್ಯಾರ್ಥಿ ಗಳು ಪಾಲ್ಗೊಂಡಿದ್ದರು.
ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಆನಂದ್‍ಕುಮಾರ್, ಕೆರಗೋಡು ಠಾಣಾ ಉಪನಿರೀಕ್ಷಕ ಸತೀಶ್ ನಾಯಕ್ ಭೇಟಿ ನೀಡಿದರು.

No comments:
Post a Comment