ಮೈಸೂರು.ಅ.10- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಟೋಬರ್ 10 ರಿಂದ 12 ರವರೆಗೆ ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಇಂದು ಸಂಜೆ 4-35 ಗಂಟೆಗೆ ವಿಶೇಷ ವಿಮಾನದ ಮೂಲಕ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಮೈಸೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಅಕ್ಟೋಬರ್ 11 ರಂದು ಬೆಳಿಗ್ಗೆ 9 ಗಂಟೆಗೆ ಚಾಮುಂಡಿ ಬೆಟ್ಟದ ತೊಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2.16 ಗಂಟೆಗೆ ಅರಮನೆ ಆವರಣದ ಬಲರಾಮ ದ್ವಾರದ ಬಳಿ ನಂಧೀಧ್ವಜಕ್ಕೆ ಪೂಜೆ ಸಲ್ಲಿಸಿದ ನಂತರ 2.45 ಕ್ಕೆ ಅರಮನೆ ಒಳಾವರಣದಲ್ಲಿ ವಿಜಯದಶಮಿ ಮೆರವಣಿಗೆ ಉದ್ಘಾಟನೆ ಮತ್ತು ಕಾರ್ಯಕ್ರಮ ವೀಕ್ಷಿಸಲಿದ್ದಾರೆ. ಸಂಜೆ 4 ಗಂಟೆಗೆ ಕುವೆಂಪುನಗರದಲ್ಲಿರುವ ಕರುಣ ಚಾರಿಟಬಲ್ ಟ್ರಸ್ಟ್‍ನ ನವ್ಯ ಸಂತಾನೋತ್ಪತ್ತಿ ಕೇಂದ್ರ ಉದ್ಘಾಟಿಸಲಿದ್ದಾರೆ. ರಾತ್ರಿ 8 ಗಂಟೆಗೆ ಬನ್ನಿಮಂಟಪದಲ್ಲಿ ಕರ್ನಾಟಕದ ಘನತೆವೆತ್ತ ರಾಜ್ಯಪಾಲರ ಉಪಸ್ಥಿತಿಯಲ್ಲಿ ಪಂಜಿನ ಕವಾಯತ್ ವೀಕ್ಷಿಸಿದ ನಂತರ ಮೈಸೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಅಕ್ಟೋಬರ್ 12 ರಂದು ಬೆಳಿಗ್ಗೆ 10-30 ಗಂಟೆಗೆ ನಜರ್‍ಬಾದ್‍ನಲ್ಲಿರುವ ಪೊಲೀಸ್ ಪಬ್ಲಿಕ್ ಶಾಲೆಯ ನೂತನ ನರ್ಸರಿ ಬ್ಲಾಕ್ ಕಟ್ಟಡ ಉದ್ಘಾಟಿಸಿದ ನಂತರ ಮಧ್ಯಾಹ್ನ 12 ಗಂಟೆಗೆ ಮೈಸೂರು ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

No comments:
Post a Comment