Friday, 19 May 2017

ಸಾವಯವ ಕೃಷಿಗೆ ಉತ್ತೇಜನ ನೀಡಲು ಸೂಚನೆ: ಎಂ.ಕೃಷ್ಣಪ್ಪ


  ಸಾವಯವ ಕೃಷಿಗೆ ಉತ್ತೇಜನ ನೀಡಲು ಸೂಚನೆ: ಎಂ.ಕೃಷ್ಣಪ್ಪ
 ಮಂಡ್ಯ ಮೇ.19.  ರಾಸಾಯನಿಕ ಗೊಬ್ಬರವನ್ನು ಕೃಷಿಯಲ್ಲಿ ಕಡಿಮೆ ಮಾಡುವ ಸಲುವಾಗಿ ನೈಸರ್ಗಿಕ, ಸಾವಯವ ಕೃಷಿಯನ್ನು ರೈತರಿಗೆ ಪರಿಚಯಿಸಿ ಉತ್ತೇಜನ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಕೃಷ್ಣಪ್ಪ ಅವರು ತಿಳಿಸಿದರು.
    ಅವರು ಇಂದು ಶುಕ್ರವಾರ ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
  ಪ್ರಸ್ತುತ ಮುಂಗಾರು ಮಳೆ ಉತ್ತಮವಾಗಿದ್ದು, ರಾಸಾಯನಿಕ ಹಾಗೂ ಬಿತ್ತನೆ ಬೀಜಗಳಿಗೆ ತೊಂದರೆಯಾಗದಂತೆ ಕೃಷಿ ಅಧಿಕಾರಿಗಳು ಮುಂಜಾಗ್ರತ ಕ್ರಮ ವಹಿಸಬೇಕೆಂದು ಕೃಷಿ ಅಧಿಕಾರಿಗೆ ಸೂಚಿಸಿದ ಸಚಿವರು ರಾಸಾಯನಿಕ ಗೊಬ್ಬರವನ್ನು ಕೃಷಿಯಲ್ಲಿ ಕಡಿಮೆ ಮಾಡುವ ಸಲುವಾಗಿ ನೈಸರ್ಗಿಕ, ಸಾವಯವ ಕೃಷಿಯನ್ನು ರೈತರಿಗೆ ಪರಿಚಯಿಸಿ ಎಂದು ಅವರು ತಿಳಿಸಿದರು.
   ವಿವಿಧ ಇಲಾಖೆಗಳಿಂದ ರೈತರು, ಅರ್ಹರಿಗೆ ರೂಪಿಸಲಾಗಿರುವ ಯೋಜನೆಗಳ ಬಗ್ಗೆ ಅಧಿಕಾರಿಗಳು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಸಾರ್ವಜನಿಕ ಹಾಗೂ ಪ್ರಮುಖ ಸ್ಥಳಗಳನ್ನು ಗುರುತಿಸಿ ಅಲ್ಲಿ ವಿವಿಧ ಯೋಜನೆಗಳ ಬಗ್ಗೆ ಹೋಬಳಿ ಕೇಂದ್ರಗಳಲ್ಲಿ ದೊಡ್ಡ ದೊಡ್ಡ ಫ್ಲೆಕ್ಸ್ ಹಾಕುವುದರೊಂದಿಗೆ ಜನರಿಗೆ ತಿಳಿಯಪಡಿಸುವಂತೆ ಸಲಹೆ ನೀಡಿದರು.
    ಜಂಟಿ ಕೃಷಿ ನಿರ್ದೇಶಕಿ ರಾಜಾ ಸುಲೋಚನಾ ಪ್ರತಿಕ್ರಿಯಿಸಿ ಮಾತನಾಡಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದ್ದು, ಈಗಾಗಲೇ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ. ಸಬ್ಸಿಡಿ ದರದಲ್ಲಿ ದ್ವಿದಳ ಬಿತ್ತನೆ ಬೀಜಗಳನ್ನು ಪೂರೈಕೆ ಮಾಡಲಾಗುತ್ತಿದೆ. ರಾಗಿ ಬಿತ್ತನೆ ಬೀಜ ಕೊರತೆ ಇದ್ದು, ಪೂರೈಕೆಗೆ ಅಗತ್ಯ ಕ್ರಮ ವಹಿಸುವುದಾಗಿ ತಿಳಿಸಿದರು.
  ಅರಣ್ಯ ಇಲಾಖೆಯಿಂದ ಹಸಿರ ವನಸಿರಿ ಬೆಳೆಸುವ ಸಲುವಾಗಿ ಸೀಡ್‍ಬಾಲ್ ವಿಶೇಷ ಅಭಿಯಾನ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಅದರ ಪೂರ್ವ ತಯಾರಿಗೆ ಸಾಕಷ್ಟು ಖರ್ಚು, ಸಮಯ ವ್ಯರ್ಥವಾಗುತ್ತದೆ. ಅದಕ್ಕಾಗಿ ಬೆಟ್ಟ-ಗುಡ್ಡ ಪ್ರದೇಶಗಳನ್ನು ಗುರುತಿಸಿ ಅಲ್ಲಿ ಹೆಲಿಕಾಪ್ಟರ್ ಮೂಲಕ ಮರಗಳ ಬಿತ್ತನೆ ಬೀಜ ಚೆಲ್ಲುವಂತೆ ಮಾಡುವುದರಿಂದ ಹಸಿರ ವನಸಿರಿಯನ್ನು ವೃದ್ಧಿಸಬಹುದು ಎಂದು  ಸಚಿವರು ತಿಳಿಸಿದರು.
  ಇದೇ ಸಂದರ್ಭದಲ್ಲಿ ಮಾತನಾಡಿದ ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ ಅವರು ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಪಕ್ಕದಲ್ಲಿ ಎಷ್ಟೋ ದಶಕಗಳಿಂದ ಒಣಗಿರುವ ಮರಗಳಿವೆ. ಗಾಳಿಯ ರಭಸಕ್ಕೆ ಮರದ ಕೊಂಬೆಗಳು ಮುರಿದು ಬೀಳುತ್ತಿವೆ.ಇದರಿಂದ ಸಾಕಷ್ಟು ಅಪಾಯ ಸೃಷ್ಟಿಯಾಗುವ ಸಾಧ್ಯತೆಗಳಿದ್ದು ಆ ಮರಗಳನ್ನು ಕೂಡಲೇ ತೆರವುಗೊಳಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ  ಸೂಚಿಸಿದರು. ಅಲ್ಲದೇ ನರೇಗಾ ಯೋಜನೆಯಡಿ ತೋಟಗಾರಿಕೆ, ಅರಣ್ಯ, ಕೃಷಿ ಸೇರಿದಂತೆ ಅನೇಕ ಇಲಾಖೆಗಳಡಿ ಕಾಮಗಾರಿಗಳನ್ನು ತೆಗೆದುಕೊಳ್ಳುವುದಕ್ಕೆ ಅವಕಾಶಗಳಿವೆ. ಆದರೆ, ಪಿಡಿಒಗಳು ಪಂಚಾಯಿತಿ ಕಾಮಗಾರಿಗಳಿಗಷ್ಟೇ ಆದ್ಯತೆ ನೀಡುತ್ತಿದ್ದಾರೆ. ಇದರ ಅಗತ್ಯ ಕ್ರಮವಹಿಸುವಂತೆ ಸಭೆಯಲ್ಲಿ ಸೂಚಿಸಿದರು.
    ಇದಕ್ಕೆ ಪ್ರತಿಕ್ರಿಯಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಶರತ್ ಅವರು ಜಿಲ್ಲೆಯಲ್ಲಿರುವ 234 ಗ್ರಾಮ ಪಂಚಾಯಿತಿಗಳ ಪೈಕಿ 55 ಪಿಡಿಒ ಹುದ್ದೆಗಳು ಖಾಲಿ ಇವೆ. ಇದರಿಂದ ಹಲವು ಕಡೆಗಳಲ್ಲಿ ಒಬ್ಬ ಪಿಡಿಒಗೆ ಎರಡೆರಡು ಪಂಚಾಯಿತಿಗಳಿಗೆ ಉಸ್ತುವಾರಿ ವಹಿಸಲಾಗಿದ್ದು ವಿವಿಧ ಇಲಾಖೆಗಳಡಿ ಕಾಮಗಾರಿಗಳನ್ನು ತೆಗೆದುಕೊಳ್ಳುವುದಕ್ಕೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಅವರು ತಿಳಿಸಿದರು.
  ಸಭೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿಗಳಾದ ಎಸ್. ಜಿಯಾವುಲ್ಲಾ, ಪೊಲೀಸ್ ವರಿಷ್ಠಾಧಿಕಾರಿಗಳಾದ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಜಿ.ಪ್ರೇಮಾ ಕುಮಾರಿ, ನಗರಸಭೆ ಅಧ್ಯಕ್ಷರಾದ ಬೋರೆಗೌಡ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಗಾಯಿತ್ರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದರು.

ಮೇ.20 ರಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರ ಪ್ರವಾಸ
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಾದ ಎಂ.ಆರ್.ವೆಂಕಟೇಶ, ಸದಸ್ಯರಾದ ಮೀನಾಕ್ಷಮ್ಮ, ಗೋಕುಲನಾರಾಯಣಸ್ವಾಮಿ ಅವರು ಮೇ 20 ರಂದು ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅವರು ಅಂದು ಬೆಳಿಗ್ಗೆ 9 ಗಂಟೆಗೆ ಪೌರಕಾರ್ಮಿಕರ ಕಾಲೋನಿಗಳಿಗೆ ಭೇಟಿ ನೀಡುವರು ನಂತರ ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾ ಪಂಚಾಯತ್ ಕಛೇರಿ ಸಭಾಂಗಣದಲ್ಲಿ ಪೌರಕಾರ್ಮಿಕರ ಪ್ರಗತಿ ಪರಿಶೀಲನಾ ಸಭೆ ನಡೆಸುವರು ಎಂದು ಪ್ರಕಟಣೆ ತಿಳಿಸಿದೆ.

ಮೇ 20 ರಂದು ವಿದ್ಯುತ್ ವ್ಯತ್ಯಯ
ಮಂಡ್ಯ ವಿದ್ಯುತ್ ವಿತರಣಾ ಕೇಂದ್ರದಲ್ಲಿ  ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 20 ರಂದು ಬೆಳಿಗ್ಗೆ 9 ರಿಂದ ಸಂಜೆ 2 ಗಂಟೆಯ ವರೆಗೆ ಈ ಕೆಳಗೆ ತಿಳಿಸಿರುವ ಪ್ರದೇಶಗಳಲ್ಲಿ ವಿದ್ಯುತ್‍ನಲ್ಲಿ ಅಡಚಣೆವುಂಟಾಗುವುದರಿಂದ ಕಂಪನಿಯೊಂದಿಗೆ ಸಹಕರಿಸಬೇಕೆಂದು ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವ್ಯತ್ಯಯ ಉಂಟಾಗುವ ಪ್ರದೇಶಗಳ ವಿವರ ನಗರ ಪ್ರದೇಶಗಳಾದ ಕಲ್ಲಹಳ್ಳಿ, ಚಾಮುಂಡೇಶ್ವರಿ ನಗರ, ಮರಿಗೌಡ ಬಡಾವಣಿ, ಶಂಕರನಗರ, ಇಂಡುವಾಳು, ಕಿರಗಂದೂರು, ಕ್ಯಾತುಂಗೆರೆ ಗ್ರಾಮಾಂತರ ಪ್ರದೇಶಗಳಾದ   ಪಣಕನಹಳ್ಳಿ, ತಂಡಸನಹಳ್ಳಿ, ಕೊತ್ತತ್ತಿ, ಮೊತ್ತಹಳ್ಳಿ, ಬೇವಿನಹಳ್ಳಿ, ಎ. ಹುಲ್ಲುಕೆರೆ, ಬಿ.ಹುಲ್ಲುಕೆರೆ  ಹಾಗೂ ಸುತ್ತಮುತ್ತಲಿನ ಗ್ರಾಮಗಳು.



sanjemitraepaper.blogspot.in: ‘ಅಂತರರಾಷ್ಟ್ರೀಯ ಗಮನ ಸೆಳೆಯಲು 50 ಸಾವಿರಕ್ಕೂ ಹೆಚ್ಚು ಜನರ...

sanjemitraepaper.blogspot.in: ‘ಅಂತರರಾಷ್ಟ್ರೀಯ ಗಮನ ಸೆಳೆಯಲು 50 ಸಾವಿರಕ್ಕೂ ಹೆಚ್ಚು ಜನರ...: ‘ಅಂತರರಾಷ್ಟ್ರೀಯ ಗಮನ ಸೆಳೆಯಲು 50 ಸಾವಿರಕ್ಕೂ ಹೆಚ್ಚು ಜನರಿಂದ ಯೋಗಾಸನ’      ಮೈಸೂರು.ಮೇ.19. ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಜೂನ್ 21 ರಂದು ಅಂತರರಾಷ್ಟ್ರೀಯ ...

‘ಅಂತರರಾಷ್ಟ್ರೀಯ ಗಮನ ಸೆಳೆಯಲು 50 ಸಾವಿರಕ್ಕೂ ಹೆಚ್ಚು ಜನರಿಂದ ಯೋಗಾಸನ’

‘ಅಂತರರಾಷ್ಟ್ರೀಯ ಗಮನ ಸೆಳೆಯಲು 50 ಸಾವಿರಕ್ಕೂ ಹೆಚ್ಚು ಜನರಿಂದ ಯೋಗಾಸನ’
     ಮೈಸೂರು.ಮೇ.19. ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಜೂನ್ 21 ರಂದು ಅಂತರರಾಷ್ಟ್ರೀಯ ಯೋಗಾ ದಿನಾಚರಣೆಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುವಂತೆ ಹಾಗೂ ಯೋಗಾ ರಾಜಧಾನಿಯಾಗಿ ಮೈಸೂರನ್ನು ಬಿಂಬಿಸುವ ರೀತಿಯಲ್ಲಿ ಆಚರಿಸಲು ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ರಂದೀಪ್ ಡಿ. ಅವರು ತಿಳಿಸಿದರು.
    ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಯೋಗಾ ದಿನಾಚರಣೆ ಆಚರಿಸುವ ಸಂಬಂಧ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಯೋಗಾಸಾನ ತರಬೇತಿ ನೀಡುವ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಭೆ ನಡೆಸಿ 50 ಸಾವಿರಕ್ಕೂ ಹೆಚ್ಚು ಜನ ಏಕಕಾಲದಲ್ಲಿ ಯೋಗಾ ದಿನಾಚರಣೆಯ ಯೋಗಾಭ್ಯಾಸದಲ್ಲಿ ಭಾಗವಹಿಸುವಂತೆ ಸಂಘಟಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
     ಮೈಸೂರಿನಲ್ಲಿ ಯೋಗಾ ತರಬೇತಿ ನಡೆಸುವ ಹಲವಾರು ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳು ಸಭೆಯಲ್ಲಿ ಭಾಗವಹಿಸಿ ಈ ಬೃಹತ್ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಭರವಸೆ ನೀಡಿದವು. ಪ್ರವಾಸೋದ್ಯಮ ಇಲಾಖೆ, ಆಯುಷ್ ಇಲಾಖೆ, ನೆಹರೂ ಯುವಕೇಂದ್ರ, ಯೋಗಾ ಮತ್ತು ಪ್ರಕೃತಿ ಚಿಕಿತ್ಸೆ ಮಹಾವಿದ್ಯಾಲಯ ಮುಂತಾದ ಸಂಸ್ಥೆಗಳು ಜಿಲ್ಲಾಡಳಿತದ ಜೊತೆ ಕೈಜೋಡಿಸಿ ಈ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.
    ಯೋಗಾ ದಿನಾಚರಣೆಗೆ ಅರಮನೆ ಆವರಣವನ್ನು ಕೇಂದ್ರವಾಗಿಟ್ಟುಕೊಂಡು  ಸಂಘಟಿಸಲಾಗುತ್ತಿದ್ದು ಇಲ್ಲಿ ಸುಮಾರು 10 ಸಾವಿರ ಜನ  ಯೋಗಾಸಾನ ಮಾಡಬಹುದಾಗಿದೆ. ಉಳಿದವರಿಗೆ ಅರಮನೆ ಆಸು-ಪಾಸಿನ ಸಾರ್ವಜನಿಕ ಸ್ಥಳಗಳಲ್ಲಿ ಕೋಟೆ ಆಂಜನೇಸ್ವಾಮಿ ದೇವಸ್ಥಾನದ ಮುಂಭಾಗ, ರಾಜಪಥ ರಸ್ತೆ, ದೇವರಾಜ ಅರಸು ರಸ್ತೆ ಮುಂತಾದ ಸ್ಥಳಗಳಲ್ಲಿ ಸ್ಥಳಾವಕಾಶ ಕಲ್ಪಿಸಲಾಗುತ್ತದೆ. ಧ್ವನಿವರ್ಧಕ ವ್ಯವಸ್ಥೆ ಮಾಡಲಾಗಿದ್ದು, ಮಾರ್ಗದರ್ಶಕರು ನೀಡುವ ಸೂಚನೆಗಳು ಎಲ್ಲಾ ಸ್ಥಳಗಳಲ್ಲೂ ಧ್ವನಿಸಲಿದೆ ಎಂದರು.
    ಖಾಸಗಿ ಹಾಗೂ ಸರ್ಕಾರಿ ಶಾಲಾ/ ಕಾಲೇಜು ವಿದ್ಯಾರ್ಥಿಗಳು, ಎನ್.ಎನ್.ಎಸ್., ಎನ್.ಸಿ.ಸಿ. ಕೆಡೆÀಟ್‍ಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರು ಹಾಗೂ ಸಾರ್ವಜನಿಕರು ಸಹ ಭಾಗವಹಿಸಲು ಜಿಲ್ಲಾಧಿಕಾರಿಗಳು ಮನವಿ ಮಾಡಿದರು.
     ಭಾಗವಹಿಸುವವರು ಬಿಳಿವಸ್ತ್ರ ಧರಿಸಿದರೇ ಸೂಕ್ತ. ಯೋಗಾ ಶಾಲೆಗಳಲ್ಲಿ ಬೇರೆ ಬಣ್ಣದ ಸಮವಸ್ತ್ರವಿದ್ದರೆ ಅದಕ್ಕೂ ಅವಕಾಶ ಕಲ್ಪಿಸಲಾಗುವುದು. ಕಾರ್ಪೆಟ್ ವ್ಯವಸ್ಥೆ ಇರುತ್ತದೆ. ಭಾಗವಹಿಸುವವರು ಶಿಷ್ಟಾಚಾರದಂತೆ ಯೋಗಾಭ್ಯಾಸ ಮಾಡಬೇಕಾಗುವುದರಿಂದ ಅವರಿಗೆ ಮುಂಚಿತವಾಗಿ ಒಂದು ವಾರಗಳ ಕಾಲ ತರಬೇತಿ ನೀಡಲು ವ್ಯವಸ್ಥೆ ಮಾಡಲಾಗುವುದು ಎಂದರು.
     ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಜರ್ನಾಧನ್, ಜಿಲ್ಲಾ ಆಯುಷ್ ಅಧಿಕಾರಿ ಡಾ||  ಸೀತಾಲಕ್ಷ್ಮಿ, ನೆಹರೂ ಯುವ ಕೇಂದ್ರದ ಜಿಲ್ಲಾ ಸಮನ್ವಯಾಧಿಕಾರಿ ನಟರಾಜು, ಆಹಾರ ಇಲಾಖೆಯ ಹಿರಿಯ ಉಪನಿರ್ದೇಶಕ ಡಾ|| ಕಾ. ರಾಮೇಶ್ವರಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೆಚ್.ಆರ್. ಬಸಪ್ಪ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಚನ್ನಪ್ಪ ಹಾಗೂ  ವಿವಿಧ ಇಲಾಖೆಯ ಅಧಿಕಾರಿಗಳು, ಸರ್ಕಾರೇತರ ಸಂಸ್ಥೆಗಳು, ಪ್ರತಿನಿಧಿಗಳು ಭಾಗವಹಿಸಿದ್ದರು.
(ಛಾಯಾಚಿತ್ರ ಲಗತ್ತಿಸಿದೆ).

ಪ್ರವಾಸ ಕಾರ್ಯಕ್ರಮ
     ಮೈಸೂರು.ಮೇ.19:- ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ|| ಹೆಚ್.ಸಿ. ಮಹದೇವಪ್ಪ ಅವರು ಮೇ  20 ಹಾಗೂ 21 ರಂದು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
    ಮೇ 20 ರಂದು 11 ಗಂಟೆಗೆ ಸರ್ಕಾರಿ ಅತಿಥಿಗೃಹದಲ್ಲಿ ಮಾನ್ಯ ಮುಖ್ಯಮಂತ್ರಿಗಳ ಜೊತೆ ಜನತಾ ದರ್ಶನ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮೈಸೂರು ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಯಲಿದೆ ಹಾಗೂ ಸಾರ್ವಜನಿಕರ ಭೇಟಿ ಕುಂದು ಕೊರತೆಗಳ ವಿಚಾರಣೆಯಲ್ಲಿ ಭಾಗವಹಿಸಿ ನಂತರ ಮೈಸೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
    ಮೇ 21 ರಂದು ಸಂಜೆ 4 ಗಂಟೆಗೆ ಜೆ.ಎಲ್.ಬಿ. ರಸ್ತೆಯಲ್ಲಿರುವ ಇನ್ಸ್‍ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಹಿಮಾ ಪ್ರಕಾಶನ ಇವರ ಸಹಯೋಗದೊಂದಿಗೆ ಬಿ. ಶ್ಯಾಮಸುಂದರ ಅವರ “ಸುದ್ದಿಗೆ ಬೆಳೆದ ಕೈ ಕಾಲುಗಳು”,  “ಶಂಕ್ರುಕಟ್ಟೆ” ಕಥಾ ಸಂಕಲನ ಮತ್ತು  “ಹೆಣ್ಣು ಬೇಕು ಹೆಣ್ಣು” ಪ್ರಬಂಧ ಸಂಕಲನದ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 6 ಗಂಟೆಗೆ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 7 ಗಂಟೆಗೆ ಮೈಸೂರಿನಿಂದ ಬೆಂಗಳೂರಿಗೆ ತೆರಳುವರು.

ಪ್ರವಾಸ ಕಾರ್ಯಕ್ರಮ
     ಮೈಸೂರು.ಮೇ.19. ಕೇಂದ್ರ ನಗರಾಭಿವೃದ್ಧಿ, ವಸತಿ, ನಗರ ಬಡತನ ನಿರ್ಮೂಲನೆ ಹಾಗೂ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವರಾದ ವೆಂಕಯ್ಯ ನಾಯ್ಡು ಅವರು ಮೇ 21 ರಂದು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
      ಅಂದು ಮಧ್ಯಾಹ್ನ 3-45ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಸಂಜೆ 4 ಗಂಟೆಗೆ ಹೋಟೆಲ್ ಪ್ರೆಸಿಡೆಂಟ್ ನಲ್ಲಿ ಆಯೋಜಿಸಿರುವ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 5-15ಕ್ಕೆ ಶ್ರೀ  ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು.  ಸಂಜೆ 7-30 ಗಂಟೆಗೆ ಮೈಸೂರು ವಿಮಾನ ನಿಲ್ದಾಣದ ಮೂಲಕ ಬೆಂಗಳೂರಿಗೆ ತೆರಳುವರು.

ಮೇ 26 ರಿಂದ 29 ರವರೆಗೆ ಕೌನ್ಸಿಲಿಂಗ್
     ಮೈಸೂರು.ಮೇ.19.(ಕರ್ನಾಟಕ ವಾರ್ತೆ):- ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ ಏಕಲವ್ಯ ಮಾದರಿ/ ಡಾ|| ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ/ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ಪ್ರವೇಶ ಪರೀಕ್ಷೆಯ ಫಲಿತಾಂಶವು ದಿನಾಂಕ 15-05-2017 ರಂದು ಪ್ರಕಟಗೊಂಡಿರುತ್ತದೆ.
     ಕೌನ್ಸಿಲಿಂಗ್‍ಗೆ ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ಸಹ ಪ್ರಕಟಿಸಲಾಗಿದೆ. ತಾಲ್ಲೂಕಿನ ಎಲ್ಲಾ ಬಿ.ಇ.ಒ ಕಚೇರಿ, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರುಗಳ ಕಚೇರಿಗಳು ಹಾಗೂ ವಸತಿ ಶಾಲೆಗಳಲ್ಲಿ ಪ್ರಕಟಿಸಲಾಗಿದೆ.
     ಜಿಲ್ಲಾ ಮಟ್ಟದ ಕೌನ್ಸಿಲಿಂಗ್ ದಿನಾಂಕ 26-05-2017 ರಿಂದ 29-05-2017 ರವರೆಗೆ ನಡೆಯಲಿದ್ದು, ಮೆರಿಟ್ ಮತ್ತು ಪ್ರವರ್ಗವಾರು ನಡೆಯುವ ಕೌನ್ಸಿಲಿಂಗ್  ದಿನಾಂಕ ಈ ಕೆಳಕಂಡಂತೆ ಇರುತ್ತದೆ.
     ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಡಾ|| ಬಾಬು ಜಗಜೀವನರಾಂ ಭವನದ ಕಟ್ಟಡ, ಆದಿಪಂಪ ರಸ್ತೆ, ನಾರಾಯಣಸ್ವಾಮಿ ಬ್ಲಾಕ್, ಪಡುವಾರಹಳ್ಳಿ ಪೂರ್ವ ಬಡಾವಣೆ, ಮೈಸೂರು ಇಲ್ಲಿ  ಮೇ 26 ರಂದು ಪರಿಶಿಷ್ಟ ಜಾತಿ ಬಾಲಕಿಯರು, ಮೇ 27 ರಂದು ಪರಿಶಿಷ್ಟ ಜಾತಿ  ಹಾಗೂ  ಪರಿಶಿಷ್ಟ ವರ್ಗದ ಬಾಲಕರು, ಮೇ 28 ರಂದು ಪರಿಶಿಷ್ಟ ವರ್ಗ ಬಾಲಕಿಯರು ಹಾಗೂ ಪ್ರವರ್ಗ-1, 2ಎ, 2ಬಿ ವರ್ಗದ ಬಾಲಕರು ಹಾಗೂ ಬಾಲಕಿಯರು ಹಾಗೂ ಮೇ 29 ರಂದು 3ಎ, 3ಬಿ ಹಾಗೂ ಕಾಯ್ದಿರಿಸಿದ ವಿದ್ಯಾರ್ಥಿಗಳು, ಬಾಲಕರು ಹಾಗೂ ಬಾಲಕಿಯರಿಗೆ ಕೌನ್ಸಿಲಿಂಗ್ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಣ್ಣದ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ಬಳಸಿದರೇ ಕ್ರಿಮಿನಲ್ ಮೊಕದ್ದಮೆ
      ಮೈಸೂರು.ಮೇ.19. ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಣೆ ಸಂಬಂಧ  ಪ್ಲಾಸ್ಟರ್ ಆಫ್ ಪ್ಯಾರೀಸ್ ಹಾಗೂ ವಿಷಕಾರಿ ರಸಾಯನಿಕ ಬಣ್ಣ ಬಳಸಿ ತಯಾರಿಸಿರುವ ಗಣೇಶ ಮೂರ್ತಿಗಳನ್ನು  ಬಳಸದಂತೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಜಿ. ಜಗದೀಶ್ ಅವರು ಮನವಿ ಮಾಡಿದ್ದಾರೆ.
     ವಿಷಕಾರಿ ರಾಸಾಯನಿಕ, ಲೋಹ ಲೇಪದ, ಪ್ಲಾಸ್ಟರ್ ಆಫ್ ಪ್ಯಾರೀಸ್‍ನ ಗಣೇಶನ ಮೂರ್ತಿ ಬಳಕೆ ಮಾಡಬೇಡಿ. ಸಾದಾ ಜೇಡಿ ಮಣ್ಣಿನ ಮುದ್ದಾದ ಪುಟ್ಟ ಗಣೇಶ ವಿಗ್ರಹವನ್ನು ಸ್ಥಾಪಿಸಿ, ಎಲೆ, ಹೂವುಗಳಿಂದ ಮಾಡಿದ ನೈಸರ್ಗಿಕ ಬಣ್ಣ ಹಚ್ಚಿದ ಗಣಪನನ್ನೇ ಪೂಜಿಸಿ ಎಂದು ಅವರು ಮನವಿ ಮಾಡಿದ್ದಾರೆ.
      ಸಾಮೂಹಿಕವಾಗಿ ನಡೆಸುವ ಗಣೇಶನ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಿ, ಎಲ್ಲೂ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಬೇಡಿ, ಬಾವಿ, ಕೆರೆ, ಹೊಳೆಗಳಲ್ಲಿ ಗಣಪತಿ ವಿಸರ್ಜನೆ ಮಾಡಬೇಡಿ. ಹಾಗೆ ಮಾಡಿದರೆ ಅಂತರ್ಜಲ, ಕುಡಿಯುವ ನೀರಿನ ಸೆಲೆ-ಎಲ್ಲವೂ ಮಲಿನಗೊಳ್ಳುತ್ತವೆ. ಬದಲಿಗೆ ಬಕೆಟ್‍ನಲ್ಲಿ, ಸಂಚಾರಿ ವಿಸರ್ಜನಾ ವಾಹನದಲ್ಲಿ ವಿಸರ್ಜಿಸಿ, ಸೂಚಿತ ಕೆರೆಗಳಲ್ಲಿ ವಿಸರ್ಜಿಸುವ ಮುನ್ನ ಹೂವು, ವಸ್ತ್ರ, ಪ್ಲಾಸ್ಟಿಕ್ ಹಾರ ಎಲ್ಲವನ್ನೂ ತೆಗೆಯಿರಿ, ಗಣಪತಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿಸಬೇಡಿ. ಪಟಾಕಿಯ ಹೊಗೆ ವಿಷಪೂರಿತ; ಅಲ್ಲದೆ ರಸ್ತೆ ತುಂಬಾ ಕಸವಾಗುತ್ತದೆ. ಗಣೇಶ ಹಬ್ಬದಲ್ಲಿ ರಸ್ತೆ, ಚರಂಡಿಯಲ್ಲಿ ಹೂವಿನ ಹಾರ, ತಟ್ಟೆ, ಲೋಟ, ಎಲೆ ಎಸೆಯಬೇಡಿ. ಕಸದ ವಾಹನ ಬಳಸುವಂತೆ ಅವರು ತಿಳಿಸಿದ್ದಾರೆ.
        ಗಣೇಶ ಮತ್ತು ಗೌರಿ ಮೂರ್ತಿಗಳನ್ನು ಸಿದ್ದಪಡಿಸುವವರು / ತಯಾರಿಸುವವರು / ಮಾರಾಟ ಮಾಡುವವರು ವಿಷಪೂರಿತ, ರಾಸಾಯನಿಕವುಳ್ಳ ಬಣ್ಣ ಮತ್ತು ಪ್ಲಾಸ್ಟರ್ ಆಫ್ ಪ್ಯಾರೀಸ್ ಅನ್ನು ಮೂರ್ತಿಗಳ ತಯಾರಿಕೆಗೆ ಉಪಯೋಗಿಸಬಾರದು. ಒಂದು ವೇಳೆ ಈ ರೀತಿಯ ಮೂರ್ತಿಗಳನ್ನು ತಯಾರಿಸುವುದಾಗಲೀ / ಮಾರಾಟ ಮಾಡುವುದಾಗಲೀ / ಉಪಯೋಗಿಸುವುದಾಗಲೀ ಕಂಡು ಬಂದರೆ ಅಂತಹ ಮೂರ್ತಿಗಳನ್ನು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಜಪ್ತಿ ಮಾಡಿ ದಂಡ ವಿಧಿಸಲಾಗುವುದು ಹಾಗೂ ಸಂಬಂಧಪಟ್ಟವರ ವಿರುದ್ದ ಕ್ರಿಮನಲ್ ಮೊಕದಮೆ ಹೂಡಿ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
     ನಗರದಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್‍ನಲ್ಲಿ ತಯಾರಿಸಿದ ಗೌರಿ, ಗಣೇಶ ಮೂರ್ತಿಗಳನ್ನು ಮಾರಾಟ ಮಾಡುವುದನ್ನು ತಡೆಗಟ್ಟುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿರುತ್ತದೆ. ಇದರೊಂದಿಗೆ ನಗರವನ್ನು ಪರಿಸರ ಪ್ರೇಮಿನಗರ, ಸ್ವಚ್ಛನಗರ ಎಂಬ ಗರಿಮೆಯನ್ನು ಕಾಪಾಡಬೇಕಾಗಿರುತ್ತದೆ ಅವರು ಮನವಿ ಮಾಡಿದ್ದಾರೆ.

Thursday, 11 May 2017

ತಂತ್ರಾಂಶದಲ್ಲೂ ಕನ್ನಡ ಬಳಕೆ ಮಾಡಿ; ಸಿದ್ದರಾಮಯ್ಯ

ತಂತ್ರಾಂಶದಲ್ಲೂ ಕನ್ನಡ ಬಳಕೆ ಮಾಡಿ; ಸಿದ್ದರಾಮಯ್ಯ
      ಮೈಸೂರು ಮೇ. 11. ಮೈಸೂರು ಜಿಲ್ಲೆಯಲ್ಲಿ ಸರ್ಕಾರದ ಮಾಹಿತಿ ನೀಡುವ ಇಲಾಖೆಗಳು ಸಹ ತಂತ್ರಾಂಶದಲ್ಲಿ ಕನ್ನಡ ಬಳಕೆ ಮಾಡುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ. ಎಸ್.ಜಿ. ಸಿದ್ಧರಾಮಯ್ಯ ಅವರು ತಿಳಿಸಿದರು.
      ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕನ್ನಡ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಮಟ್ಟದಲ್ಲಿ ಪ್ರತಿ ತಿಂಗಳು ನಡೆಯುವ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕನ್ನಡ ಅನುಷ್ಠಾನದ ಬಗ್ಗೆ ಪರಿಶೀಲಿಸಬೇಕು. ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಕನ್ನಡ ಪರ ಸಂಘಟನೆಗಳು, ವೆಬ್‍ಸೈಟ್‍ಗಳನ್ನು ಪರಿಶೀಲಿಸಿ ಕನ್ನಡ ಅನುಷ್ಠಾನದಲ್ಲಿ ಲೋಪವಿದ್ದಲ್ಲಿ, ವರದಿಯನ್ನು ಸಂಬಂಧಿಸಿದ ನೀಡುವಂತೆ ತಿಳಿಸಲಾಗುವುದು. ಆದರೆ ಇಲಾಖೆಗಳು ಪ್ರಾಧಿಕಾರದಿಂದ ಬರೆಯುವ ಪತ್ರಗಳಿಗೆ ಸರಿಯಾದ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದರು.
     ಜಿಲ್ಲೆಯಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಕನ್ನಡ ಜಾಗೃತಿ ಸಭೆ ನಡೆಸಿ ಜಿಲ್ಲೆಯಲ್ಲಿ ಕನ್ನಡ ಅನುಷ್ಠಾನದ ಬಗ್ಗೆ ಚರ್ಚಿಸಬೇಕು. ತಾಲ್ಲೂಕು ಮಟ್ಟದಲ್ಲೂ ಸಹ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಕನ್ನಡ ಜಾಗೃತಿ ಸಭೆ ನಡೆಸಬೇಕು. ಕನ್ನಡದವರನ್ನು ಕಾರ್ಖಾನೆಗಳಲ್ಲಿ ಸಿ ಮತ್ತು ಡಿ ಗ್ರೂಪ್ ವರ್ಗದ ನೌಕರರನ್ನು ನೇಮಕ ಮಾಡಿಕೊಂಡಿರುವ  ಬಗ್ಗೆ ಕೈಗಾರಿಕೆ ಇಲಾಖೆಯಿಂದ ಮಾಹಿತಿ ಪಡೆದ ಅಧ್ಯಕ್ಷರು ಕೆಲವು ಕಾರ್ಖನೆಗಳಲ್ಲಿ ಕನ್ನಡ ಮಾತನಾಡುವವರ ಬಗ್ಗೆ ತಾರತಮ್ಯ ನಡೆಯುತ್ತಿರುವ ಬಗ್ಗೆ ದೂರು ಬಂದಿದ್ದು, ಈ ಬಗ್ಗೆ ಪರಿಶೀಲಿಸುವಂತೆ ಕೈಗಾರಿಕೆ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
      ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಕನ್ನಡ ಭಾಷೆಯಲ್ಲಿ ಮಾತನಾಡಿದರೆ ದಂಡ ವಿಧಿಸುತ್ತಾರೆ ಎಂಬ ದೂರುಗಳು ಕೇಳಿಬರುತ್ತಿದೆ. ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಪರಿಶೀಲಿಸಬೇಕು. ಮೈಸೂರು ಜಿಲ್ಲೆ ಪ್ರವಾಸಿ ತಾಣವಾಗಿದ್ದು, ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡದ ನಾಮಫಲಕವನ್ನು ಅಳವಡಿಸಬೇಕು. ಕನ್ನಡದ ಜೊತೆಯಲ್ಲಿ ಆಂಗ್ಲ ಅಥವಾ ಇನ್ನಿತರ ಭಾಷೆಗಳನ್ನು ಅಳವಡಿಸುವಂತೆ ತಿಳಿಸಿದರು.
      ಸಭೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರಾದ ಸುದರ್ಶನ, ಮಡ್ಡಿಗೆರೆ ಗೋಪಾಲ್, ರೇವಣ್ಣ, ಪ್ರಮೋದ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತದ ಅಧ್ಯಕ್ಷ ವೈ.ಡಿ.ರೇವಣ್ಣ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್  ಆಧ್ಯಕ್ಷ ವೈ.ಡಿ.ರಾಜಣ್ಣ, ಜಿಲ್ಲಾಧಿಕಾರಿ ರಂದೀಪ್ ಡಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಮುರುಳೀಧರ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಚನ್ನಪ್ಪ ಅವರುಗಳು ಉಪಸ್ಥಿತರಿದ್ದರು.
ವಿವಿಧ ಸೌಲಭ್ಯ ಅರ್ಜಿ ಆಹ್ವಾನ
ಮೈಸೂರು ಮೇ. 11.ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ನೇರಸಾಲ- ಹಸು/ಎಮ್ಮೆ/ಕುರಿ/ಮೇಕೆ ಸಾಕಾಣಿಕೆ, ಕಿರುಸಾಲ ಯೋಜನೆ, ಮಹಿಳಾ ಸಮೃದ್ಧಿ ಯೋಜನೆ, ಗಂಗಾಕಲ್ಯಾಣ ಯೋಜನೆ/  ವೈಯಕ್ತಿಕ ತೆರೆದ ಬಾವಿ ಯೋಜನೆ, ಏತ ನೀರಾವರಿ ಯೋಜನೆ, ಭೂ ಒಡೆತನ ಯೋಜನೆ ಹಾಗೂ ವಿಕಲಚೇತನ ಯೋಜನೆಯಡಿ ಸೌಲಭ್ಯ ಒದಗಿಸಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಮೇ 25 ಕಡೆಯ ದಿನಾಂಕವಾಗಿದ್ದು, ಅರ್ಜಿಯನ್ನು ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಚಾಮರಾಜಮೊಹಲ್ಲಾ, ಮೈಸೂರು ಇಲ್ಲಿ/ ತಾಲ್ಲೂಕು ಮಟ್ಟದಲ್ಲಿರುವ ನಿಗಮ ಕಚೇರಿಗಳು/ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ/ ತಾಲ್ಲೂಕು ಪಂಚಾಯತ್ ಕಚೇರಿ/ನಿಗಮದ ವೆಬ್‍ಸೈಟ್ ತಿತಿತಿ.ಚಿಜಛಿಟ.ಞಚಿಡಿಟಿಚಿಣಚಿಞಚಿ.gov.iಟಿ  ಇಲ್ಲಿ ಪಡೆದುಕೊಳ್ಳುವುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2332480 ನ್ನು ಸಂಪರ್ಕಿವುದು.
ಮಾವಿನ ಮೇಳ
     ಮೈಸೂರು ಮೇ. 11. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ಮೇ 10 ರಿಂದ ಜೂನ್ 9 ರವರೆಗೆ ಸಯ್ಯಾಜಿರಾವ್ ರಸ್ತೆಯಲ್ಲಿರುವ ಸಗಟು ಹಣ್ಣುಗಳ ಮಾರುಕಟ್ಟೆ ಉಪ ಪ್ರಾಂಗಣದಲ್ಲಿ ಮಾವಿನ ಮೇಳವನ್ನು ಆಯೋಜಿಸಲಾಗಿದೆ.
    ಗ್ರಾಹಕರಿಗೆ ನೇರವಾಗಿ ಉತ್ತಮ ಗುಣಮಟ್ಟದ ವಿವಿಧ ತಳಿಯ ಮಾವಿನ ಹಣ್ಣುಗಳನ್ನು ಉತ್ತಮ ಬೆಲೆಯಲ್ಲಿ ದೊರೆಯುವಂತೆ ಮಾಡುವುದು ಮಾವಿನ ಮೇಳದ ಉದ್ದೇಶವಾಗಿದೆ. ಗ್ರಾಹಕರು ಮತ್ತು ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  
ಭಾರಿ ವಾಹನ ಚಾಲನಾ ತರಬೇತಿ
      ಮೈಸೂರು ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೈಸೂರು ನಗರ ಮತ್ತು ಗ್ರಾಮಾಂತರ ಪ್ರದೇಶದ ಪರಿಶಿಷ್ಟ ಜಾತಿ ನಿರುದ್ಯೋಗಿ ಯುವಕ/ಯುವತಿಯರಿಗೆ ಭಾರಿ ವಾಹನ ಚಾಲನಾ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದೆ.
       ಅರ್ಜಿ ಸಲ್ಲಿಸುವವರ ವಯೋಮಿತಿ 21 ರಿಂದ 35 ವರ್ಷದೊಳಗಿರಬೇಕು. ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿರಬೇಕು. ಲಘುವಾಹನ ಚಾಲನಾ ಪರವಾನಗಿ ಪಡೆದು ಒಂದು ವರ್ಷ ಪೂರ್ಣಗೊಳಿಸಿರಬೇಕು. ಆಸಕ್ತರು, ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಮೈಸೂರು ತಾಲ್ಲೂಕು ಇಲ್ಲಿ ಪಡೆದುಕೊಂಡು ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮೇ 25 ರೊಳಗಾಗಿ ಸಲ್ಲಿಸುವುದು. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 0821-2520910 ನ್ನು ಸಂಪರ್ಕಿಸುವುದು.
ಹಳೇ ದಿನಪತ್ರಿಕೆಗಳ ವಿಲೇವಾರಿ
      ಮೈಸೂರು ಮೇ. 11. ನಗರ ಕೇಂದ್ರ ಗ್ರಂಥಾಲಯ, ಮೈಸೂರು ಹಾಗೂ ವಿವಿಧ ಶಾಖೆಗಳಲ್ಲಿ ಮತ್ತು ಸೇವಾ/ ಕೇಂದ್ರಗಳಲ್ಲಿ ಹಾಗೂ ವಾಚನಾಲಯಗಳಲ್ಲಿ 2016-17 ನೇ ಸಾಲಿಗೆ ಸಂಬಂಧಿಸಿದಂತೆ ಗ್ರಂಥಾಲಯಗಳಲ್ಲಿ ಲಭ್ಯವಿರುವ ಹಳೇ ದಿನಪತ್ರಿಕೆ ಹಾಗೂ ನಿಯತಕಾಲಿಕೆಗಳನ್ನು ನಿಯಮಾನುಸಾರ ವಿಲೇವಾರಿ ಮಾಡಲಾಗುವುದು ದರಪಟ್ಟಿ ಸಲ್ಲಿಸಲು ಮೇ 18 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ವಿವರಗಳಿಗೆ ಉಪನಿರ್ದೇಶಕರು, ನಗರ ಕೇಂದ್ರ ಗ್ರಂಥಾಲಯ, ಮೈಸೂರು. ದೂರವಾಣಿ ಸಂಖ್ಯೆ 0821-2423678 ನ್ನು ಸಂಪರ್ಕಿಸುವುದು.
ವಾಹನಗಳ ಬಹಿರಂಗ ಹರಾಜು
       ಮೈಸೂರು ಮೇ. 11: ಕೆ.ಎಸ್.ಆರ್.ಪಿ. 5ನೇ ಪಡೆ ಕಮಾಂಡೆಂಟ್ ಕಚೇರಿಗೆ ಸೇರಿದ ಅನುಪಯುಕ್ತ 11 ಟಾಟಾ ಬಸ್ಸುಗಳು ಹಾಗೂ 1 ಜೀಪುನ್ನು ಮೇ 31 ರಂದು ಬೆಳಿಗ್ಗೆ 11 ಗಂಟೆಗೆ ಲಲಿತ ಮಹಲ್ ರಸ್ತೆಯಲ್ಲಿ ಕೆ.ಎಸ್.ಆರ್.ಪಿ. 5ನೇ ಪಡೆ ಕಮಾಂಡೆಂಟ್ ಕಚೇರಿ ಆವರಣದಲ್ಲಿ ಟೆಂಡರ್ ಕಮ್ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು.
     ಟೆಂಡರ್ ನ್ನು ಮೇ 30 ರ ಸಂಜೆ 5 ಗಂಟೆಯೊಳಗಾಗಿ ಸಲ್ಲಿಸಬೇಕಿದ್ದು, ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2473549 ನ್ನು ಸಂಪರ್ಕಿಸುವುದು.


ಸಾಲಸೌಲಭ್ಯ ಅರ್ಜಿ ಆಹ್ವಾನ
      ಮೈಸೂರು ಮೇ. 11. ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನ ಯೋಜನೆಯಡಿ  ಪ್ರಥಮ ಪೀಳಿಗೆ ಉದ್ಯಮಶೀಲರಿಗೆ ಪ್ರತಿ ಘಟಕಕ್ಕೆ ಗರಿಷ್ಟ ರೂ. 10.00 ಲಕ್ಷ ಯೋಜನಾ ವೆಚ್ಚದ  ಉತ್ಪಾದನಾ ಘಟಕ ಹಾಗೂ ಆಯ್ದ ಸೇವಾ ಉದ್ಯಮಗಳನ್ನು ಪ್ರಾರಂಭಿಸಲು ವಿವಿಧ ಹಣಕಾಸು ಸಂಸ್ಥೆ ಮೂಲಕ ಸಾಲ ಒದಗಿಸಲಾಗುವುದು.
      ಅರ್ಜಿ ಸಲ್ಲಿಸುವವರ ವಯೋಮಿತಿ 21 ರಿಂದ 35 ವರ್ಷದೊಳಗಿರಬೇಕು. ವಿಶೇಷ ವರ್ಗದವರಿಗೆ 45 ವರ್ಷ ವಯೋಮಿತಿಯಾಗಿರುತ್ತದೆ. 8ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು. ಸಾಮಾನ್ಯ ವರ್ಗದ ಉದ್ಯಮ ಶೀಲರಿಗೆ ಯೋಜನಾ ವೆಚ್ಚದ ಶೇ. 25 ರಷ್ಟು (ಗರಿಷ್ಠ 2.50 ಲಕ್ಷ ರೂ.,) ವಿಶೇಷ ವರ್ಗದವರಿಗೆ ಶೇ. 30 ರಷ್ಟು (ಗರಿಷ್ಠ 3.50 ಲಕ್ಷ ರೂ. ಸಹಾಯ ಧನ ಮಂಜೂರು ಮಾಡಲಾಗುವುದು.
    ಅರ್ಜಿಯನ್ನು ವೆಬ್‍ಸೈಟ್ ತಿತಿತಿ.ಛಿmegಠಿ.ಞಚಿಡಿ.ಟಿiಛಿ.iಟಿ ಆನ್‍ಲೈನ್ ಮೂಲಕ ಜೂನ್ 12 ರೊಳಗಾಗಿ ಸಲ್ಲಿಸಬೇಕಿದ್ದು, ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2520886/ 2563370 ನ್ನು ಸಂಪರ್ಕಿಸುವುದು.
ಮೇ 12 ರಂದು ರಾಮಾ ರಾಮಾ ರೇ    
       ಮೈಸೂರು ಮೇ. 11. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ಮೈಸೂರು ಫಿಲ್ಮ್ ಸೊಸೈಟಿ, ಸಂಯುಕ್ತಾಶ್ರಯದಲ್ಲಿ ಆಯೋಜಿಸಿರುವ ಸಿನಿಮಾ ಸಮಯದಲ್ಲಿ ಮೇ 12 ರಂದು ಸಂಜೆ 6 ಗಂಟೆಗೆ ಮೈಸೂರಿನ ಕಲಾಮಂದಿರದಲ್ಲಿ ಡಿ. ಸತ್ಯಪ್ರಕಾಶ್ ನಿರ್ದೇಶನದ ರಾಮಾ ರಾಮಾ ರೇ  ಕನ್ನಡ ಚಲನಚಿತ್ರ ಪ್ರದರ್ಶಿಸಲಾಗುವುದು.
     ಮನುಷ್ಯ ಸಂಬಂಧಗಳ ಮಹತ್ವ, ಶಕ್ತಿ ಮತ್ತು ಸೂಕ್ಷ್ಮತೆಗಳನ್ನು ಜನ ಮರಣಗಳ ಭಯ ಮತ್ತು ಕ್ರೋಧ, ಭದ್ರತೆ ಮತ್ತು ಅಭದ್ರತೆ ಅದೃಷ್ಟ ಮತ್ತು ವಿಧಿಗಳ ಹಿನ್ನೆಲೆಗಳಲ್ಲಿ ರಾಮಾ ರಾಮಾ ರೇ ಚಿತ್ರ ಅನಾವರಣಗೊಳ್ಳುತ್ತದೆ. ವಿಭಿನ್ನ ವ್ಯಕ್ತಿತ್ವಗಳ ಹಾಸ್ಯ ಮತ್ತು ವ್ಯಂಗಗಳ ಘಮದೊಂದಿಗೆ ಸಾಗುವ ಜೀಪ್ ಪ್ರಯಾಣದ ಸುತ್ತ ರಾಮಾ ರಾಮಾ ರೇ ಚಿತ್ರಕಥೆ ಇರುತ್ತದೆ.
      ಇದಕ್ಕೂ ಮುನ್ನ ಅಂದು ಸಂಜೆ 5-30 ಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ಮಿಸಿರುವ ವಿಸ್ತøತ ವಿಜ್ಞಾನ ಸಾಕ್ಷ್ಯಚಿತ್ರ  ಪ್ರದರ್ಶಿಸಲಾಗುವುದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
 
ಕುಡಿಯುವ ನೀರು ಪೋಲಾಗಾದಂತೆ ಎಚ್ಚರ ವಹಿಸಿ
ಮೈಸೂರು ಮೇ. 11. ಮೈಸೂರು ನಗರದ ನೀರು ಸರಬರಾಜು ಮಾಡುವ ಮೂಲಗಳಾದ ಕಾವೇರಿ ಮತ್ತು ಕಬಿನಿ ನದಿಗಳಲ್ಲಿ ನೀರಿನ ಮಟ್ಟವು ತೀವ್ರವಾಗಿ ಇಳಿದಿರುವುದರಿಂದ ಮೈಸೂರು ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಹೊಂಗಳ್ಳಿ, ಬೆಳಗೊಳ, ಮೇಳಾಪುರ ಮತ್ತು ಬಿದರಗೋಡುಗಳಲ್ಲಿನ ಮೂಲ ಸ್ಥಾವರ ಯಂತ್ರಾಗಾರಗಳಿಗೆ ನೀರಿನ ಹರಿವು ಇಲ್ಲದಂತಾಗಿ ನೀರು ಸರಬರಾಜಿಗೆ ತೊಂದರೆಯಾಗಿದೆ.
ಮೈಸೂರು ನಗರದ ಸಾರ್ವಜನಿಕರು ಕುಡಿಯುವ ನೀರನ್ನು ಪೋಲು ಮಾಡದಂತೆ ಗೃಹಬಳಕೆಗೆ ಮಾತ್ರ ನೀರು ಬಳಕೆ ಮಾಡಿ  ನೀರು ಉಳಿತಾಯಕ್ಕಾಗಿ P್ಪ್ರಮ ಕೈಗೊಳ್ಳುವ ಮೂಲಕ ಮೈಸೂರು ಮಹಾನಗರ ಪಾಲಿಕೆಯೊಂದಿಗೆ ಸಹಕರಿಸಬೇಕಾಗಿ ಕೋರಲಾಗಿದೆ. ಸಾರ್ವಜನಿಕರು ಕುಡಿಯುವ ನೀರನ್ನು ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಉಪಯೋಗಿಸಬಾರದು, ಕುಡಿಯುವ ನೀರನ್ನು ಮನೆಯ ಅಂಗಳ ತೊಳೆಯಲು, ವಾಹನ ತೊಳೆಯಲು,  ಗಿಡಗಳಿಗೆ ನೀರು ಹಾಯಿಸಲು, ತೋಟಗಳಿಗೆ ನೀರು ಸರಬರಾಜು ಮಾಡಲು, ನಳವನ್ನು ಸದಾಕಾಲ ತೆರೆದು ನೀರು ಹರಿಯುವಂತೆ ಮಾಡುವುದು, ಟ್ಯಾಂಕ್‍ನಿಂದ ನೀರು ಸೋರುವಿಕೆಯಾಗಲು ಹಾಗೂ ನೀರು ಹರಿಯುವಂತೆ ಪೋಲು ಮಾಡುವುದನ್ನು  ಸ್ಥಗಿತಗೊಳಿಸಬೇಕಾಗಿ ಮೈಸೂರು ಮಹಾನಗರ ಪಾಲಿಕೆಯವರು ಮನವಿ ಮಾಡಿದ್ದಾರೆ.
ಗ್ರಾಹಕರು ಕುಡಿಯುವ ನೀರು ಪಡೆಯಲು ಕೊಳವೆ ಮಾರ್ಗಕ್ಕೆ ಪಂಪ್ ಅಳವಡಿಸಿ ನೀರು ತೆಗೆದುಕೊಳ್ಳುವುದು, ನಳಗಳನ್ನು ಅಳವಡಿಸದೆ ಇರುವುದರಿಂದ ಅನ್ಯತಹ ನೀರು ಪೋಲಾಗುವುದು ಕಂಡುಬಂದಲ್ಲಿ ಅಂತಹ ಗ್ರಾಹಕರುಗಳ ಪಂಪ್‍ಗಳನ್ನು ವಶಕ್ಕೆ ತೆಗೆದುಕೊಂಡು ಹಿಂದಿರುಗಿಸುವುದಿಲ್ಲ. ಹಾಗೂ ನೀರು ಸರಬರಾಜು ಸಂಪರ್ಕವನ್ನು ಕಡಿತಗೊಳಿಸುವುದಲ್ಲದೆ ದಾವೆ ಹಾಕಲು ಕ್ರಮವಹಿಸಲಾಗುವುದು ಎಂದು ಮೈಸೂರು ಮಹಾನಗರ ಪಾಲಿಕೆ ವಾಣಿವಿಲಾಸ ನೀರು ಸರಬರಾಜು ವಿಭಾಗದ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.