Saturday, 10 September 2016
10ನೇ ಸೆಪ್ಟೆಂಬರ್.ತೋಟಗಾರಿಕ ಕೃಷಿಕರಿಗೆ ಪ್ರತಿವಾರ-ಪರಿಹಾರ ಕಾರ್ಯಕ್ರಮ
ಮೈಸೂರು, ಸೆ. 10 : ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಸ್ತರಣಾ ಶಿಕ್ಷಣ ಘಟಕವಾದ ಮೈಸೂರಿನ ಇಲವಾಲದಲ್ಲಿರುವ ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕ ಹಾಗೂ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ತೋಟಗಾರಿಕೆ ಕೃಷಿಕರಿಗೆ ಅತ್ಯುಪಯುಕ್ತವಾದ ಸೇವೆ ನೀಡಲು “ಪ್ರತಿ ವಾರ - ಪರಿಹಾರ” ಎಂಬ ವಿನೂತನವಾದ ಕಾರ್ಯಕ್ರಮವನ್ನು ಪ್ರತಿ ಸೋಮವಾರ ಬೆಳಗ್ಗೆ 9.30 ರಿಂದ ಸಂಜೆ 4.30 ರವರೆಗೆ ಹಮ್ಮಿಕೊಂಡಿದೆ.
ನುರಿತ ತಜ್ಞರು ಕಾರ್ಯಕ್ರಮದಲ್ಲಿ ಭಾಗವಹಿಸಿ ತೋಟಗಾರಿಕೆ ಕೃಷಿಕರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ನೀಡಲಿದ್ದಾರೆ. ರೈತರು ತಮ್ಮ ಬೆಳೆಗಳಿಗೆ ಸಂಬಂಧಿಸಿದ ರೋಗ, ಕೀಟ, ಪೋಷಕಾಂಶ ಕೊರತೆ ಇತ್ಯಾದಿ ಯಾವುದೇ ಸಮಸ್ಯೆಗಳ ಮಾದರಿಗಳನ್ನು ತೆಗೆದುಕೊಂಡು ಬಂದು ತಜ್ಞರಲ್ಲಿ ಪರೀಕ್ಷೆಗೊಳಪಡಿಸಿ ಸೂಕ್ತ ಪರಿಹಾರ ಪಡೆಯಬಹುದಾಗಿದೆ.
ಮಣ್ಣು ಹಾಗೂ ಇತರೇ ಸಂಪನ್ಮೂಲಗಳ ವಿವರ ನೀಡಿ ಅದರ ಆಧಾರದ ಮೇಲೆ ಸೂಕ್ತ ಬೆಳೆ ಯೋಜನೆ ರೂಪಿಸವಲ್ಲೂ ಈ ತಜ್ಞರ ತಂಡದ ಸಲಹೆಗಳನ್ನು ಪಡೆಯಬುದಾಗಿದೆ. ಈ ಸೇವೆ ಬಗ್ಗೆ ಹೆಚ್ಚಿನ ಮಾಹಿತಿಗೆ ರೈತರು ಮೊಬೈಲ್ ಸಂಖ್ಯೆ 9880445919/9480557634 ಸಂಪರ್ಕಿಸಬಹುದಾಗಿದೆ.

Friday, 9 September 2016
ಸರ್ಕಾರಿ ಜಾಗದಲ್ಲಿ ನಿರ್ಮಿಸಿದ್ದ ಹೊಂಸ್ಟೇ ಹಾಗೂ ವಾಣಿಜ್ಯಮಳಿಗೆ ನೆಲಸಮ
ಮೈಸೂರು, ಸೆ. 10- ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿ ಅಕ್ರಮವಾಗಿ ನಿರ್ಮಿಸಿದ್ದ ಹೋಂ ಸ್ಟೇ, ವಾಣಿಜ್ಯ ಮಳಿಗೆಗಳನ್ನು ಹುಣಸೂರು ಉಪವಿಭಾಗಾಧಿಕಾರಿ ಡಾ: ಸೌಜನ್ಯ ಅವರ ನೇತೃತ್ವದಲ್ಲಿ ತೆರವುಗೊಳಿಸಲಾಗಿದೆ.ಪಿರಿಯಾಪಟ್ಟಣ ತಾಲ್ಲೂಕು ಹಾರನಹಳ್ಳಿ ಹೋಬಳಿ ಗಿರಗೂರು ಗ್ರಾಮದ ಸರ್ವೆ ನಂ 33 ರಲ್ಲಿ ಲಕ್ಷ್ಮಣಮೊದಲಿಯಾರ್ ಎಂಬುವರು ಸುಮಾರು 12 ಕುಂಟೆ ಜಾಗ ಒತ್ತುವಾರಿ ಮಾಡಿ ಹೋಂ ಸ್ಟೇ, ಹಾಗೂ ಮುಜೀಬ್ ಬಿನ್ ಸಿಕಂದರ್ ಅವರು ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಿದ್ದರು ಎಂದು ಉಪವಿಭಾಗಾಧಿಕಾರಿಗಳು ತಿಳಿಸಿದ್ದಾರೆ.
ಇದಲ್ಲದೆ ಶ್ರೀ ರಾಮನಾಯಕ, ಅಮಾಸೆ ಕರಿಯಪ್ಪ ದೇವಿರಮ್ಮ ಎಂಬುವವರು ತಲಾ 30 ಗುಂಟೆ, ಕಾಳಯ್ಯ ಎಂಬುವವರು 10 ಗುಂಟೆ ಹಾಗೂ ಮಾರುತಿ ಅವರು 1 ಎಕರೆ ಗೋಮಾಳ ಒತ್ತುವರಿ ಮಾಡಿ ಮುಸುಕಿನ ಜೋಳ ಬೆಳೆದಿರುತ್ತಾರೆ. ಅದನ್ನು ಸಹ ತೆರವುಗೊಳಿಸಲಾಗುತ್ತಿದೆ ಎಂದು ಅವರು ಹೇಳಿದರು.
ತೆರವು ಕಾರ್ಯಾಚರಣೆಯನ್ನು ಬುಧುವಾರ ಆರಂಭಿಸಲಾಗಿದ್ದು, ಗುರುವಾರ ಸಂಜೆಯವರೆಗೆ ನಡೆಸಲಾಗಿದೆ. ಶನಿವಾರ ಮುಂದುವರಿಸಿ ಸರ್ಕಾರಿ ಭೂಮಿಯನ್ನು ಸಂರಕ್ಷಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಪಿರಿಯಾಪಟ್ಟಣ ತಹಶೀಲ್ದಾರ್ ಹೆಚ್.ಆರ್.ರಂಗರಾಜು,ಪೊಲೀಸ್ ಇನ್ಸ್‍ಪೆಕ್ಟರ್ ಸಿದ್ದಯ್ಯ, ಕಂದಾಯ ನಿರೀಕ್ಷಕ ಸಿ.ಮಹೇಶ್, ತಾಲ್ಲೂಕು ಸರ್ವೇಯರ್ ಬಿ.ಜಿ.ನಾರಾಯಣ ಸ್ವಾಮಿ, ಗ್ರಾಮ ಲೆಕ್ಕಾಧಿಕಾರಿಎಂ.ಕೆ.ಪ್ರದೀಪ್, ಸಿಬ್ಬಂದಿ ಕೆ.ಎಂ.ರಾಜು ಮತ್ತಿತ್ತರರು ಉಪಸ್ಥಿತರಿದ್ದರು ಎಂದು ಅವರು ಹೇಳಿದರು.
ಕನ್ನಡಿಗರ ಸಂಕಷ್ಟ ನ್ಯಾಯಾಲಯಕ್ಕೆ ತಿಳಿಸುವ ಸಮರ್ಥ ವಕೀಲರು ಬೇಕು-ದೇವೇಗೌಡ
ಕನ್ನಡಿಗರ ಸಂಕಷ್ಟ ನ್ಯಾಯಾಲಯಕ್ಕೆ ತಿಳಿಸುವ ಸಮರ್ಥ ವಕೀಲರು ಬೇಕು-ದೇವೇಗೌಡ
ಮಂಡ್ಯ ಯೂಥ್ ಗ್ರೂಪ್ ಸದಸ್ಯರೊಂದಿಗೆ ಮಾತುಕತೆ ವೇಳೆ ಅಭಿಪ್ರಾಯದೆಹಲಿ: ಕಾವೇರಿ ವಿಚಾರದಲ್ಲಿ ಕರ್ನಾಟಕದ ವಕೀಲ ನಾರಿಮನ್ ತೋರಿದ ಮಾನವೀಯತೆಯನ್ನು ತಮಿಳುನಾಡು ದುರುಪಯೋಗ ಪಡಿಸಿಕೊಂಡಿದೆ. ಕಾವೇರಿ ವಿಚಾರದಲ್ಲಿ ದಶಕಗಳಿಂದ ಅನ್ಯಾಯ ಅನುಭವಿಸುತ್ತಾ ಬಂದಿರುವ ಕನ್ನಡಿಗರ ನೋವನ್ನು ಸುಪ್ರಿಂ ಕೋರ್ಟ್ ಮುಂದೆ ಸಮರ್ಥವಾಗಿ ಮಂಡಿಸುವ ವಕೀಲರು ಇಲ್ಲದಿರುವುದು ನಮ್ಮ ದುರಾದೃಷ್ಟ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ವರಿಷ್ಠರಾದ ಎಚ್.ಡಿ. ದೇವೇಗೌಡ ಅವರು ಅಭಿಪ್ರಾಯಪಟ್ಟಿದ್ದಾರೆ.
ಕಾವೇರಿ ವಿವಾದ ಹಿನ್ನೆಲೆಯಲ್ಲಿ ಕರ್ನಾಟಕ ಬಂದ್‍ಗೆ ಬೆಂಬಲವಾಗಿ ದೆಹಲಿಯ ಜಂತರ್‍ಮಂತರ್‍ನಲ್ಲಿ ಪ್ರತಿಭಟನಾ ಧರಣಿ ನಡೆಸಿದ ಮಂಡ್ಯ ಯೂಥ್ ಗ್ರೂಪ್‍ನ ಸದಸ್ಯರನ್ನು ಭೇಟಿ ಮಾಡಿದ ನಂತರ ದೇವೇಗೌಡರು ಈ ವಿಷಯ ಹೇಳಿದರು.
ಕರ್ನಾಟಕ ಕಾವೇರಿ ವಿಚಾರದಲ್ಲಿ ನಿರಂತರವಾಗಿ ಅನ್ಯಾಯ ಅನುಭವಿಸುತ್ತಾ ಬಂದಿದೆ. ಈಗಲೂ ಕೂಡ ನಾವು ತೋರಿದ ಮಾನವೀಯತೆಯನ್ನು ತಮಿಳುನಾಡು ದುರುಪಯೋಗ ಪಡಿಸಿಕೊಂಡು ರಾಜ್ಯದಿಂದ ಹೆಚ್ಚಿನ ನೀರು ಲಪಟಾಯಿಸುತ್ತಿದೆ. ತಮಿಳುನಾಡಿನಲ್ಲಿ ನೀರಿನ ಕೊರತೆ ಇರುವುದರಿಂದ ಮಾನವೀಯತೆ ಆಧಾರದ ಮೇಲೆ 10 ಸಾವಿರ ಕ್ಯೂಸೆಕ್ಸ್ ನೀರು ಬಿಡುವುದಾಗಿ ನಾರಿಮನ್ ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದರು. ಇದನ್ನು ಆಧಾರ ಮಾಡಿಕೊಂಡು ತಮಿಳುನಾಡಿಗೆ 15 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ನ್ಯಾಯಾಲಯ ಆದೇಶಿಸಿದೆ. ಇದು ಕನ್ನಡಿಗರ ಗಾಯದ ಮೇಲೆ ಎಳೆದ ಬರೆ ಎಂದು ಅವರು ಬಣ್ಣಿಸಿದರು.
ಪ್ರತಿ ನಾಲ್ಕು ವರ್ಷಕ್ಕೊಮ್ಮೆ ಕರ್ನಾಟಕ ಇಂತಹ ಪರಿಸ್ಥಿತಿ ಎದುರಿಸುತ್ತಿದೆ. ಕಳೆದ ಹತ್ತು ವರ್ಷದಿಂದ ಸರಾಸರಿ 300 ಟಿಎಂಸಿ ನೀರನ್ನು ಕರ್ನಾಟಕ ತಮಿಳುನಾಡಿಗೆ ಬಿಟ್ಟಿದೆ. ಇಷ್ಟು ಪ್ರಮಾಣದಲ್ಲಿ ನೀರು ಬಿಟ್ಟರೂ ಸಂಕಷ್ಟ ಸಂದರ್ಭದಲ್ಲಿ ಕರ್ನಾಟಕದ ಪರ ನಿಲ್ಲುವ ಗುಣ ತಮಿಳುನಾಡಿಗೆ ಇಲ್ಲ. ಪ್ರತಿ ಬಾರಿಯೂ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ. ಕಾವೇರಿ ನದಿಗೆ ಹೆಚ್ಚಿನ ಅಚ್ಚು ಕಟ್ಟು ಪ್ರದೇಶ ಕರ್ನಾಟಕದಲ್ಲೇ ಇದೆ. ಮಂಡ್ಯ, ಮೈಸೂರು, ಕನಕಪುರ ಹಾಗೂ ಚೆನ್ನಪಟ್ಟಣ ಈ ನದಿ ನೀರಿನ ಮೇಲೆ ಕಷಿ ಹಾಗೂ ಕುಡಿಯುವ ನೀರಿಗಾಗಿ ಅವಲಂಭಿಸಿದ್ದಾರೆ. ತಮಿಳುನಾಡಿನ ಈ ವರ್ತನೆಯಿಂದ ಈ ಭಾಗದ ಜನರ ಜೀವನ ಸಂಕಷ್ಟಕ್ಕೆ ಸಿಲುಕಲಿದೆ.
ಈ ಭಾಗದ ಜನರ ಸಂಕಷ್ಟವನ್ನು ಸಮರ್ಥವಾಗಿ ನ್ಯಾಯಾಲಯಗಳ ಮುಂದೆ ಮಂಡಿಸುವ ಸಾಮಥ್ರ್ಯವುಳ್ಳ ವಕೀಲರು ಬೇಕಾಗಿದ್ದಾರೆ. ಇಲ್ಲದಿದ್ದರೆ ಕರ್ನಾಟಕದ ಹಿತವನ್ನು ಯಾರೂ ಕಾಪಾಡಲಾರರು ಎಂದು ಮಾಜಿ ಪ್ರಧಾನಿಗಳು ಬೇಸರ ವ್ಯಕ್ತಪಡಿಸಿದರು
ಈ ಸಂದರ್ಭದಲ್ಲಿ ಮಂಡ್ಯ ಯೂಥ್ ಗ್ರೂಪ್‍ನ ಅಧ್ಯಕ್ಷರಾದ ಡಾ. ಅನಿಲ್ ಆನಂದ್, ಉಪಾಧ್ಯಕ್ಷರಾದ ಎಚ್.ಎಸ್.ಮಂಜು, ಸದಸ್ಯರಾದ ದೇವೇಂದ್ರ ಗುಪ್ತ, ರುದ್ರಪ್ಪ ಎಸ್ ಹಾಗೂ ಡಾ. ಯಾಶೀಕಾ ಅನಿಲ್ ಮೊದಲಾದವರು ಇದ್ದರು.
Thursday, 8 September 2016
ಬಂದ್ ಹಿನ್ನೆಲೆ: ಸೂಕ್ತ ಬಂದೋಬಸ್ತ್‍ಗೆ ಜಿಲ್ಲಾಧಿಕಾರಿಗಳ ಸೂಚನೆ
ಬಂದ್ ಹಿನ್ನೆಲೆ: ಸೂಕ್ತ ಬಂದೋಬಸ್ತ್‍ಗೆ ಜಿಲ್ಲಾಧಿಕಾರಿಗಳ ಸೂಚನೆ
ಮೈಸೂರು, ಸೆ. 8. ವಿವಿಧ ಸಂಘಟನೆಗಳು ಸೆಪ್ಟೆಂಬರ್ 9 ರಂದು ರಾಜ್ಯ ಬಂದ್‍ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಾದ ಡಿ. ರಂದೀಪ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಸಲಾಯಿತು.
ಬಂದ್ ಹಿನ್ನೆಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಸೂಕ್ತ ಬಂದೋಬಸ್ತ್ ಏರ್ಪಡಿಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕನ್ನಡಪರ ಸಂಘಟನೆಗಳು ಹೆಚ್ಚು ಸಕ್ರಿಯವಾಗಿರುವ ಜಿಲ್ಲೆಯ ಕೆಲವು ಪ್ರದೇಶಗಳನ್ನು ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿದೆ. ಆ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆಗೆ ಒತ್ತು ನೀಡಲಾಗಿದೆ ಎಂದು ಡಿ.ಸಿ.ಪಿ ಶೇಖರ್ ಅವರು ಹೇಳಿದರು.
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಕಚೇರಿಗಳಿಗೆ ಸೂಕ್ತ ಭದ್ರತೆ ಕಲ್ಪಿಸಲಾಗುವುದು. ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳಿಗೆ ಬಂದ್ ಹಿನ್ನೆಲೆಯಲ್ಲಿ ಭದ್ರತೆ ಅವಶ್ಯಕತೆ ಇದ್ದರೆ, ಅವರಿಗೂ ಭದ್ರತೆ ಒದಗಿಸಲಾಗುವುದು ಎಂದು ಶೇಖರ್ ಅವರು ಹೇಳಿದರು.
ಟಿ.ನರಸೀಪುರ, ನಂಜನಗೂಡು ತಾಲ್ಲೂಕುಗಳಲ್ಲಿ ನೀರಾವರಿ ಪ್ರದೇಶ ಇರುವುದರಿಂದ ಹೆಚ್ಚಿನ ಸಾರ್ವಜನಿಕರು ಬಂದ್‍ನಲ್ಲಿ ಭಾಗವಹಿಸಬಹುದು. ಇಲ್ಲಿನ ಹೆಚ್ಚಿನ ನಿಗಾವಹಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಶಾಲಾ ಕಾಲೇಜುಗಳಿಗೆ ರಜೆ ನೀಡಬೇಕಾಗುವುದೇ ಎಂಬುದರ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಪರಿಸ್ಥಿತಿಯನ್ನು ಸಂಜೆ ವರೆಗೂ ಅವಲೋಕಿಸಿ, ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದರು.
ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗದಂತೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಪರಿಸ್ಥಿತಿ ನೋಡಿಕೊಂಡು, ಸಾರಿಗೆ ನಿUಮದ ಬಸ್ ಸಂಚಾರದ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಮೈಸೂರು ನಗರ ಮತ್ತು ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿಗಳು ಹೇಳಿದರು.
ಬಂದ್ ನೆಪದಲ್ಲಿ ಸಾರ್ವಜನಿಕರಿಗೆ ಹಾಗೂ ಸಾರ್ವಜನಿಕರ ಆಸ್ತಿ-ಪಾಸ್ತಿಗೆ ಧಕ್ಕೆ ಉಂಟುಮಾಡಿದರೆ ಅಂತಹವರ ವಿರುದ್ಧ ಕ್ರಮಕೈಗೊಳ್ಳಬೇಕು. ಇಂತಹ ಅಹಿತಕರ ಘಟನೆಗಳು ನಡೆದರೆ ಸಾರ್ವಜನಿಕರು ಜಿಲ್ಲಾಧಿಕಾರಿಗಳ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ: 0821-2423800ಗೆ ಕರೆ ಮಾಡಿ, ತಿಳಿಸಬಹುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಟಿ. ವೆಂಕಟೇಶ್, ಮೈಸೂರು ಉಪ ವಿಭಾಗಾಧಿಕಾರಿಗಳಾದ ಸಿ.ಎಲ್. ಆನಂದ್, ಹುಣಸೂರು ಉಪವಿಭಾಗಾಧಿಕಾರಿ ಸೌಜನ್ಯ, ಮುಡಾ ಆಯುಕ್ತರಾದ ಡಾ. ಎಂ. ಮಹೇಶ್, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

Tuesday, 6 September 2016
ಹೊಳಲು ಶ್ರೀಧರ್‍ಗೆ ರಾಜ್ಯಮಟ್ಟದ ಉತ್ತಮ ಉಪನ್ಯಾಸಕ ಪ್ರಶಸ್ತಿ
ಹೊಳಲು ಶ್ರೀಧರ್‍ಗೆ ರಾಜ್ಯಮಟ್ಟದ ಉತ್ತಮ ಉಪನ್ಯಾಸಕ ಪ್ರಶಸ್ತಿ
ಕರ್ನಾಟಕ ಸರ್ಕಾರ,ಸಾರ್ವಜನಿಕ ಶಿಕ್ಷಣ ಇಲಾಖೆ,ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಇವರ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಡಾ||ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ,ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ 2016 ನೇ ಸಾಲಿನ ರಾಜ್ಯ ಪ್ರಶಸ್ತಿ ಪುರಸ್ಕøತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ತನ್ವೀರ್‍ಸೇಠ್ ಅವರು ಜಿಲ್ಲೆಯ ಬಸರಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಹೊಳಲು ಶ್ರೀಧರ್ ಅವರಿಗೆ ರಾಜ್ಯಮಟ್ಟದ ಉತ್ತಮ ಉಪನ್ಯಾಸಕ ಪ್ರಶಸ್ತಿ ಪ್ರದಾನ ಮಾಡಿದರು.
ಹೊಳಲು ಶ್ರೀಧರ್ ಅವರು ತಾವು ಬೋಧಿಸುತ್ತಿರುವ ಕನ್ನಡ ವಿಷಯದಲ್ಲಿ ಉತ್ತಮ ಫಲಿತಾಂಶ ತಂದಿರುವುದಲ್ಲದೇ,ಶೈಕ್ಷಣಿಕ ತಂತ್ರಜ್ಞಾನದ ಮೂಲಕ ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚಿನ ಕಲಿಕೆಗೆ ಒತ್ತು ನೀಡಿದ್ದಾರೆ.ಕಾಲೇಜಿನ ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದಾರೆ.ಇದಲ್ಲದೇ ಜಿಲ್ಲಾ ಕ.ಸಾ.ಪ,ಸಂಸ್ಕøತಿ ಸಂಘಟನೆ,ಜಿಲ್ಲಾ ಜಾಗೃತ ಅಂಕಣಕಾರರ ವೇದಿಕೆ,ಉಪನ್ಯಾಸಕರ ಸಂಘ ಮುಂತಾದ ಸಂಘ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.ಈಗಾಗಲೇ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ,ಜನಮೆಚ್ಚಿದ ಶಿಕ್ಷಕ ಪ್ರಶಸ್ತಿ,ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕøತರಾಗಿದ್ದು,ಹವ್ಯಾಸಿ ಪತ್ರಕರ್ತರಾಗಿಯೂ ಇವರ ಲೇಖನ,ವರದಿಗಳು,ಪದಬಂಧ ಪತ್ರಿಕೆಗಳಲ್ಲಿ ಪ್ರಕಟಗೊಳ್ಳುತ್ತಿವೆ.
ಅಭಿನಂದನೆ:ರಾಜ್ಯಮಟ್ಟದ ಉತ್ತಮ ಉಪನ್ಯಾಸಕ ಪ್ರಶಸ್ತಿ ಪಡೆದಿರುವ ಶ್ರೀಧರ್ ಅವರನ್ನು ಜಿಲ್ಲಾ ಪ.ಪೂ.ಶಿ.ಇಲಾಖೆ ಉಪನಿರ್ದೇಶಕರಾದ ಬಿ.ಎಂ.ಶ್ರೀಕಂಠಯ್ಯ, ಬಸರಾಳು ಕಾಲೇಜಿನ ಪ್ರಾಂಶುಪಾಲರಾದ ಚಂದ್ರೇಗೌಡ ಹಾಗೂ ಉಪನ್ಯಾಸಕ ವರ್ಗ ಜಿಲ್ಲಾ ಕ.ಸಾ.ಪ ಅಧ್ಯಕ್ಷ ರವಿಕುಮಾರ್ ಚಾಮಲಾಪುರ,ಕ.ಸಾ.ಪ. ಮಾಜಿ ಅಧ್ಯಕ್ಷರಾದ ಹೆಚ್.ವಿ.ಜಯರಾಂ,ತೈಲೂರು ವೆಂಕಟಕೃಷ್ಣ ಸಂಸ್ಕøತಿ ಸಂಘಟನೆ ಅಧ್ಯಕ್ಷರಾದ ಕೆ.ಪ್ರಹ್ಲಾದರಾವ್,ಕಾರ್ಯದರ್ಶಿ ಎಂವಿ.ಧರಣೇಂದ್ರಯ್ಯ, , ಅಂಕಣಕಾರರ ವೇದಿಕೆಯ ಅಧ್ಯಕ್ಷ ಸಿದ್ದರಾಜು ಆಲಕೆರೆ, ತೂಬಿನಕೆರೆ ಲಿಂಗರಾಜು,ಅನಾರ್ಕಲಿ ಸಲೀಂ,ಮಂಡ್ಯ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಪುಟ್ಟಲಿಂಗಯ್ಯ, ಮಂಡ್ಯ ಜಿಲ್ಲಾ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷ ಹನುಮಂತಯ್ಯ,ಮಂಗಲ ಯೋಗೇಶ್,ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕøತೆ ಅನುಪಮಾ,ಸಾರಿಗೆ ಅಧಿಕಾರಿ ಸೋಮಶೇಖರ್ ಮುಂತಾದವರು ಅಭಿನಂದಿಸಿದ್ದಾರೆ.

Sunday, 4 September 2016
ಕವಿ ಚನ್ನವೀರ ಕಣವಿ ಅವರಿಗೆ ಮೈಸೂರು ದಸರಾ ಉತ್ಸವ ಸಮಿತಿಯಿಂದ ಆಮಂತ್ರಣ ಕನ್ನಡದ ಮೂಲಕ ವಿಶ್ವದರ್ಶನವಾಗಬೇಕು: ಕಣವಿ ಅಭಿಮತ
ಕವಿ ಚನ್ನವೀರ ಕಣವಿ ಅವರಿಗೆ ಮೈಸೂರು ದಸರಾ ಉತ್ಸವ ಸಮಿತಿಯಿಂದ ಆಮಂತ್ರಣ
ಕನ್ನಡದ ಮೂಲಕ ವಿಶ್ವದರ್ಶನವಾಗಬೇಕು: ಕಣವಿ ಅಭಿಮತ
ಮೈಸೂರು. ಸೆ. 4.ಧಾರವಾಡದ ಕಲ್ಯಾಣನಗರದಲ್ಲಿರುವ ಕವಿ ನಿವಾಸ ‘ಚೆಂಬೆಳಕು’ಗೆ ಭಾನುವಾರ ಬೆಳಿಗ್ಗೆ ಮೈಸೂರು ಮಹಪೌರರಾದ ಬಿ.ಎಲ್.ಭೈರಪ್ಪ, 2016ರ ದಸರಾ ಉತ್ಸವ ಸ್ವಾಗತ ಸಮಿತಿಯ ಸದಸ್ಯ ಕಾರ್ಯದರ್ಶಿಗಳೂ ಆಗಿರುವ ಮೈಸೂರು ಜಿಲ್ಲಾಧಿಕಾರಿ ಡಿ.ರಂದೀಪ್, ಉಪವಿಶೇಷಾಧಿಕಾರಿಗಳಾಗಿರುವ ಅಪರ ಜಿಲ್ಲಾಧಿಕಾರಿ ಟಿ.ವೆಂಕಟೇಶ, ಕಾರ್ಯದರ್ಶಿ ಪುಟ್ಟಶೇಷಗಿರಿ, ಧಾರವಾಡ ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಹಳ್ಳಿ ಮತ್ತಿತರ ಗಣ್ಯರು ಭೇಟಿ ನೀಡಿ ಅಕ್ಟೋಬರ್ 1 ರಿಂದ ಆರಂಭವಾಗುವ ಈ ಬಾರಿಯ ದಸರಾ ಉದ್ಘಾಟನೆಗೆ ಆಹ್ವಾನ ನೀಡಿದರು. ಮೈಸೂರು ಪೇಟ, ಶಾಲು, ಶ್ರೀಗಂಧದ ಹಾರ, ಫಲ ಪುಷ್ಪ ನೀಡಿ ಸತ್ಕರಿಸಿ, ಆಮಂತ್ರಣ ನೀಡಲಾಯಿತು.
ಗೌರವ ಸ್ವೀಕರಿಸಿ ಮಾತನಾಡಿದ ಕವಿ ಚನ್ನವೀರ ಕಣವಿ, ವಿಜಯನಗರದ ಸ್ಥಾಪನೆಗೆ ಮುನ್ನುಡಿ ಬರೆದ ಗಂಡುಗಲಿ ಕುಮಾರರಾಮ ಆರಂಭಿಸಿದ ದಸರಾ ಉತ್ಸವವನ್ನು ಮೈಸೂರು ಅರಸರು ಮುಂದುವರೆಸಿಕೊಂಡು ಬಂದರು.ಕರ್ನಾಟಕ ಏಕೀಕರಣಗೊಂಡ ಬಳಿಕವೂ ಸರಕಾರ ಉತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡು ಬಂದಿದೆ.ಸಾಂಸ್ಕøತಿಕ ಕೇಂದ್ರವಾಗಿರುವ ಮೈಸೂರು ಬೆಳಕಿನ ಕಿಂಡಿಯಾಗಿ ಕನ್ನಡದ ಮೂಲಕ ವಿಶ್ವದರ್ಶನ ಮಾಡಿಸುತ್ತಿದೆ.ರಾಜ್ಯ ಸರಕಾರ ಮೈಸೂರು ದಸರಾ ಉತ್ಸವ ಉದ್ಘಾಟನೆಯ ಗೌರವ ನೀಡಿರುವದಕ್ಕೆ ಆಭಾರಿಯಾಗಿದ್ದೇನೆ ಎಂದು ಸಾಹಿತಿ,ನಾಡೋಜ ಚನ್ನವೀರ ಕಣವಿ ಹೇಳಿದರು.
ಮೈಸೂರು,ಧಾರವಾಡ,ಮಂಗಳೂರು ನಗರಗಳು ಕರ್ನಾಟಕದ ಸಾಂಸ್ಕøತಿಕ ಕೇಂದ್ರಗಳಾಗಿವೆ.ಇವು ನವೋದಯ ಸಾಹಿತ್ಯದ ಕೇಂದ್ರಗಳೂ ಆಗಿದ್ದವು.ಮೈಸೂರು ದಸರಾ ಉತ್ಸವವು ಏಕೀಕೃತ ಕರ್ನಾಟಕದ ಉತ್ಸವವಾಗಿದೆ.ಬಂಗಾಲದಲ್ಲಿ ದುರ್ಗಾಪೂಜೆಯ ಮೂಲಕ ವಂಗಭಂಗ ಚಳವಳಿ,ಮಹಾರಾಷ್ಟ್ರದಲ್ಲಿ ಗಣೇಶ ಉತ್ಸವವನ್ನು ಬಾಲ ಗಂಗಾಧರ ತಿಲಕರು ದೇಶಪ್ರೇಮ ಬಿತ್ತಲು ಬಳಸಿಕೊಂಡರು. ಕರ್ನಾಟಕದಲ್ಲಿ ದಸರಾ ಹಬ್ಬವು ನಾಡಿನ ಅಖಂಡತೆ ಸಾರಲು ಪ್ರೇರಣೆಯಾಯಿತು. ವರಕವಿ ದ.ರಾ.ಬೇಂದ್ರೆ, ಬೆಟಗೇರಿ ಕೃಷ್ಣಶರ್ಮರು ಧಾರವಾಡದಲ್ಲಿ 1925 ರಿಂದಲೇ ನಾಡಹಬ್ಬ ಆಚರಿಸುವ ಪರಂಪರೆ ಆರಂಭಿಸಿದ್ದರು ಎಂದು ಹೇಳಿದರು.
ಅನೆಗೊಂದಿಯ ಗಂಡುಗಲಿ ಕುಮಾರರಾಮ ಆರಂಭಿಸಿದ ದಸರಾ ಹಬ್ಬದ ಪರಂಪರೆ ವಿಜಯನಗರದ ಅರಸರು,ಮೈಸೂರು ಒಡೆಯರ ಮೂಲಕ ನಿರಂತರವಾಗಿ ಸಾಗಿಕೊಂಡು ಬಂದಿದೆ.ಸ್ವಾತಂತ್ರ್ಯಾನಂತರ ಅಸ್ತಿತ್ವಕ್ಕೆ ಬಂದ ಸರಕಾರಗಳು ದಸರಾ ಆಚರಣೆ ಮುಂದುವರೆಸಿಕೊಂಡು ಬಂದಿರುವುದು ಒಳ್ಳೆಯ ಬೆಳವಣಿಗೆಯಾಗಿದೆ.ಜಗತ್ಪ್ರಸಿದ್ಧವಾಗಿರುವ ಮೈಸೂರು ದಸರೆಯ ಮೂಲಕ ವಿಶ್ವದರ್ಶನವಾಗುತ್ತಿದೆ.ಎಲ್ಲ ಜಿಲ್ಲೆಗಳಲ್ಲಿ ಇದೇ ಮಾದರಿಯ ಸಾಂಸ್ಕøತಿಕ ಉತ್ಸವಗಳು ನಡೆಯಬೇಕು.ಅವು ಜನತೆಯ ಹಬ್ಬಗಳಾಗಬೇಕು ಎಂದರು.
ಮೈಸೂರು ಮಹಾನಗರ ಪಾಲಿಕೆಯ ಮಹಾಪೌರ ಬಿ.ಎಲ್.ಭೈರಪ್ಪ ಮಾತನಾಡಿ, ತಾಯಿ ಚಾಮುಂಡೇಶ್ವರಿಯ ನಾಡಹಬ್ಬವನ್ನು ಕರ್ನಾಟಕ ಸರಕಾರ ಮುಂದುವರೆಸಿಕೊಂಡು ಬಂದಿದೆ. ಉನ್ನತಾಧಿಕಾರ ಸಮಿತಿಯು ದಸರಾ ಉದ್ಘಾಟನೆಗೆ ಯಾರನ್ನು ಆಹ್ವಾನಿಸಬೇಕೆಂಬ ತೀರ್ಮಾನ ಕೈಗೊಳ್ಳವ ಅಧಿಕಾರವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯವನವರಿಗೆ ವಹಿಸಿತ್ತು. ಅವರ ಸೂಚನೆಯಂತೆ ಹಿರಿಯ ಕವಿ ಚನ್ನವೀರ ಕಣವಿ ಅವರನ್ನು ಧಾರವಾಡಕ್ಕೆ ಬಂದು ದಸರಾ ಉದ್ಘಾಟನೆಗೆ ಆಹ್ವಾನಿಸುತ್ತಿದ್ದೇವೆ.ಕಣವಿಯವರ ಮೂಲಕ ಹೊಸ ಪೀಳಿಗೆಗೆ ಮಾರ್ಗದರ್ಶನ ಸಿಗಲಿದೆ ಎಂಬ ಆಶಾಭಾವ ವ್ಯಕ್ತಪಡಿಸಿದರು.
ಮೈಸೂರು ಜಿಲ್ಲಾಧಿಕಾರಿ ,ಮೈಸೂರು ದಸರಾ ಉತ್ಸವ ಸ್ವಾಗತ ಸಮಿತಿಯ ಸದಸ್ಯ ಕಾರ್ಯದರ್ಶಿ ಡಿ.ರಂದೀಪ ಮಾತನಾಡಿ ಅಕ್ಟೋಬರ 1 ರಂದು ಬೆಳಿಗ್ಗೆ 11.40 ಕ್ಕೆ ಮೈಸೂರು ದಸರಾ ಉತ್ಸವ ಉದ್ಘಾಟನೆಯಾಗಲಿದೆ.11 ದಿನಗಳ ಈ ಹಬ್ಬವನ್ನು ಜನತೆಯ ದಸರೆಯಾಗಿ ಆಚರಿಸಲಿದ್ದೇವೆ ಎಂದರು.
ಧಾರವಾಡ ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಹಳ್ಳಿ ಮಾತನಾಡಿ, ಕನ್ನಡದ ಹೆಮ್ಮೆಯ ಪುತ್ರ ಕವಿ ಚನ್ನವೀರ ಕಣವಿಯವರನ್ನು ದಸರಾ ಉದ್ಘಾಟನೆಗಾಗಿ ಕರ್ನಾಟಕ ಸರಕಾರ ಆಮಂತ್ರಿಸಿರುವುದು .ಸಮಸ್ತ ಧಾರವಾಡ ಜನತೆಯಲ್ಲಿ ಸಂಭ್ರಮ ತಂದಿದೆ ಎಂದರು.
ಮೈಸೂರಿನ ಅಪರ ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಧಾರವಾಡದ ಪ್ರಭಾರ ಅಪರ ಜಿಲ್ಲಾಧಿಕಾರಿ ರಮೇಶ ಕೋನರಡ್ಡಿ, ಧಾರವಾಡದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ರಂಗಣ್ಣವರ ಮತ್ತಿತರರು ಉಪಸ್ಥಿತರಿದ್ದರು.
ಸೆಪ್ಟಂಬರ್ 28 ರಂದು ಕವಿ ಚನ್ನವೀರ ಕಣವಿ ಅವರು ಪುತ್ರ ಶಿವಾನಂದ ಕಣವಿ ಅವರೊಂದಿಗೆ ರೈಲಿನ ಮೂಲಕ ಮೈಸೂರಿಗೆ ತೆರಳುವರು. ಅಕ್ಟೋಬರ್ 1 ರಂದು ಬೆಳಿಗ್ಗೆ 11.40 ಕ್ಕೆ ಚಾಮುಂಡಿ ಬೆಟ್ಟದಲ್ಲಿ 2016ರ ದಸರಾ ಉತ್ಸವಕ್ಕೆ ಚಾಲನೆ ನೀಡುವರು.
Subscribe to:
Posts (Atom)